ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರು ಪೂರೈಕೆಗೆ ಆಗ್ರಹ

Last Updated 4 ಜೂನ್ 2013, 6:44 IST
ಅಕ್ಷರ ಗಾತ್ರ

ಮದ್ದೂರು:  ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರು ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿ ವಿರುದ್ಧ ಘೋಷಣೆ ಕೂಗಿದ ಗ್ರಾಮಸ್ಥರು, ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡ ವೆಂಕಟೇಗೌಡ ಮಾತನಾಡಿ, ಕಳೆದ ಮೂರು ತಿಂಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉದ್ಭವಿಸಿದೆ. ವಿದ್ಯುತ್ ಅಭಾವದ ನೆಪವೊಡ್ಡುವ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಾಕಷ್ಟು ನೀರಿನ ಲಭ್ಯತೆಯಿದ್ದರೂ ನೀರು ಒದಗಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಪ್ರತಿನಿತ್ಯ ಮಹಿಳೆಯರು ಮಕ್ಕಳು ಎರಡು ಮೂರು ಕಿ.ಮೀ ದೂರವಿರುವ ಖಾಸಗಿ ಪಂಪ್‌ಹೌಸ್‌ಗಳಿಗೆ ತೆರಳಿ ನೀರು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಆಗಮಿಸಿದ ಪಿಡಿಒ ಚಂದ್ರು ಪ್ರತಿಭಟನಾನಿರತರನ್ನು ಸಮಾಧಾನಪಡಿಸಿದರು. ಇನ್ನೊಂದು ವಾರದೊಳಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗುವುದು. ಆ ವರೆಗೆ ತಾತ್ಕಾಲಿಕವಾಗಿ ಟ್ಯಾಂಕರ್‌ಗಳ ಮೂಲಕ ನೀರು ಒದಗಿಸುವ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

ಮುಖಂಡರಾದ ಅಲ್ಲಬಕಾಸ್, ರತ್ನಮ್ಮ, ಐಶಾ, ಜಯಮ್ಮ, ಷಾಹಿನಾ, ರಿಹಾನ್, ನಗೀನ್, ಪುಟ್ಟಮ್ಮ, ಶಿವನಂಜಮ್ಮ ಸೇರಿದಂತೆ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT