ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಾರಸ್ವಾಮಿ ರಾಜೀನಾಮೆ ಇಲ್ಲ

Last Updated 4 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಬುಧವಾರ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಪಕ್ಷದ ಹಿರಿಯ ನಾಯಕರು ಸಮಸ್ಯೆಯನ್ನು ಬಗೆಹರಿಸುವ ವಿಶ್ವಾಸವಿದೆ. ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಸೇರಿದಂತೆ ಹಿರಿಯ ಮುಖಂಡರೊಂದಿಗೆ ಚರ್ಚಿಸಿದ ನಂತರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದರು.

ಪಕ್ಷದಲ್ಲಿ ತಮ್ಮನ್ನು ತುಳಿಯುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಪ್ರಕಟಿಸಿದ್ದರು. ಆದರೆ ಶಾಸಕ ಡಿ.ಎನ್.ಜೀವರಾಜ್ ಸೇರಿದಂತೆ ಕೆಲವರ ಮಧ್ಯಸ್ಥಿಕೆಯಿಂದಾಗಿ ಕುಮಾರಸ್ವಾಮಿ ಸದ್ಯಕ್ಕೆ ರಾಜೀನಾಮೆ ನೀಡದೆ ಇರುವ ನಿರ್ಧಾರಕ್ಕೆ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT