ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಾರಸ್ವಾಮಿಯೇ ಜೆಡಿಎಸ್‌ನ ಮುಖ್ಯಮಂತ್ರಿ ಅಭ್ಯರ್ಥಿ: ಸಿಂಧ್ಯಾ ಘೋಷಣೆ

Last Updated 21 ಫೆಬ್ರುವರಿ 2012, 11:00 IST
ಅಕ್ಷರ ಗಾತ್ರ

ಬೆಂಗಳೂರು (ಪಿಟಿಐ): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಾತ್ಯತೀತ ಜನತಾದಳದ (ಜೆಡಿಎಸ್) ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್‌ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ಮಂಗಳವಾರ ಘೋಷಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಂಧ್ಯಾ ಅವರು `ಜೆಡಿಎಸ್‌ನಲ್ಲಿ  ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಗಳಿಲ್ಲ. ಕುಮಾರಸ್ವಾಮಿ ಅವರನ್ನು ಪಕ್ಷದ ವತಿಯಿಂದಲೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದರಲ್ಲಿ ದೇವೇಗೌಡರ ಸ್ವಹಿತಾಸಕ್ತಿ ಇಲ್ಲ~ ಎಂದು ತಿಳಿಸಿದರು.

`ಕುಮಾರಸ್ವಾಮಿ ಅವರು ಅತ್ಯಂತ ಜನಪ್ರೀಯ ನಾಯಕರಾಗಿದ್ದು, ಅವರಿಗೆ ಅಪಾರ ಜನ ಬೆಂಬಲವಿದೆ~ ಎಂದ ಸಿಂಧ್ಯಾ, `ನಾನು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಲ್ಲ~ ಎಂದು ಸ್ಪಷ್ಟಪಡಿಸಿದರು.

ಇತ್ತೀಚೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್‌ನಲ್ಲಿ ಕುಮಾರಸ್ವಾಮಿಗಿಂತ ಸಾಕಷ್ಟು  ಹಿರಿಯರು ನಾಯಕರಿದ್ದು ಅವರಲ್ಲಿ ಒಬ್ಬರನ್ನು ದೇವೇಗೌಡರು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿ ಚುನಾವಣೆ ಎದುರಿಸಲಿ ಎಂದು ದೇವೇಗೌಡರಿಗೆ ಸವಾಲು ಹಾಕಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT