ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಲಪತಿ ಡಾ.ಎನ್.ಪ್ರಭುದೇವ್ ಆತಂಕ

Last Updated 16 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ವಿಜ್ಞಾನವನ್ನು ಆಳವಾಗಿ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದ್ದು, ಇದರಿಂದ ದೇಶವು ಭವಿಷ್ಯದಲ್ಲಿ ವಿಜ್ಞಾನಿಗಳ  ಕೊರತೆ ಎದುರಿಸುವ ಸಾಧ್ಯತೆಯಿದೆ~ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್. ಪ್ರಭುದೇವ್ ಆತಂಕ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ನಗರದ ಯವನಿಕ ಸಭಾಂಗಣದಲ್ಲಿ ಗುರುವಾರ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಜಾಗತಿಕವಾಗಿ ದೇಶವು ಗುರುತಿಸಿಕೊಳ್ಳಬೇಕಾದರೆ ವಿಜ್ಞಾನವನ್ನು ಸಾಧನವಾಗಿ ಉಪಯೋಗಿಸುವ ಅಗತ್ಯವಿದೆ. ವಿಜ್ಞಾನವೆಂದರೆ ಕೇವಲ ಪಠ್ಯ ವಿಷಯ ಮಾತ್ರವಲ್ಲ. ಸಮಕಾಲೀನ ವೈಜ್ಞಾನಿಕ ಅಂಶಗಳ ಸಮಗ್ರ ಅಧ್ಯಯನ. ವಿಜ್ಞಾನಕ್ಕೆ ಸವಾಲೊಡ್ಡುವ ರೀತಿಯಲ್ಲಿ ದೃಶ್ಯ ಮಾಧ್ಯಮಗಳು ಮೂಢನಂಬಿಕೆಗಳ ಬಗ್ಗೆ ಕಾರ್ಯಕ್ರಮವನ್ನು ಬಿತ್ತರಿಸುತ್ತಿರುವುದು ಖಂಡನೀಯ~ ಎಂದರು.

ಪರಿಷತ್ತಿನ ಅಧ್ಯಕ್ಷ ಡಾ.ಎಚ್.ಎಸ್.ನಿರಂಜನಾರಾಧ್ಯ, `ಮೂಲ ವಿಜ್ಞಾನದ ಸಮರ್ಪಕ ಅಧ್ಯಯನದಿಂದ ಮಾತ್ರ ರಾಜ್ಯವು ತಂತ್ರಜ್ಞಾನ ಕ್ಷೇತ್ರದಲ್ಲಿ ಮನ್ನಣೆ ಗಳಿಸಲು ಸಾಧ್ಯ. ಗ್ರಾಮೀಣ ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರವನ್ನು ಸದ್ಬಳಕೆ ಮಾಡಿಕೊಳ್ಳುವ ಅಗತ್ಯವಿದೆ~ ಎಂದು ಹೇಳಿದರು.

ರಸಪ್ರಶ್ನೆ ಸ್ಪರ್ಧೆಯಲ್ಲಿ ವಿವಿಧ ಜಿಲ್ಲೆಗಳ 34 ತಂಡಗಳು ಭಾಗವಹಿಸಿದ್ದವು. 8 ತಂಡಗಳು ಅಂತಿಮ ಸುತ್ತಿಗೆ ಆಯ್ಕೆಯಾದವು. ಶಿರಸಿಯ ಕಾಳಿಕಾ ಭವಾನಿ ಆಂಗ್ಲ ಪ್ರೌಢಶಾಲೆ, ದಕ್ಷಿಣ ಕನ್ನಡ ಜಿಲ್ಲೆಯ ಆಂಗ್ಲ ಪ್ರೌಢಶಾಲೆ, ರಾಮನಗರದ ಸೇಂಟ್ ಥಾಮಸ್ ಪ್ರೌಢ ಶಾಲೆಯ ವಿದ್ಯಾರ್ಥಿಗಳು ವಿಜೇತರಾದರು.

ಪರಿಷತ್ತಿನ ಗೌರವ ಕಾರ್ಯದರ್ಶಿ ವಸುಂಧರಾ ಭೂಪತಿ, ಉಪಾಧ್ಯಕ್ಷರಾದ ಬಿ.ದೊಡ್ಡಬಸಪ್ಪ, ಡಾ.ಎಚ್.ಆರ್.ಸ್ವಾಮಿ, ಸಂಯೋಜಕ ಪ್ರೊ.ಎಸ್.ವಿ.ಸಂಕನೂರ, ಸಹಸಂಯೋಜಕ ಆರ್.ಎಸ್.ಪಾಟೀಲ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT