ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಲಪತಿ ನೇಮಕ ಊರ್ಜಿತ

Last Updated 8 ಫೆಬ್ರುವರಿ 2011, 20:00 IST
ಅಕ್ಷರ ಗಾತ್ರ

ಬೆಂಗಳೂರು: ನೂತನವಾಗಿ ಸ್ಥಾಪಿಸಲಾದ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ವಿದ್ವಾಂಸ ಪ್ರೊ.ಮಲ್ಲೇಪುರ ಜಿ.ವೆಂಕಟೇಶ್ ಅವರನ್ನು ಕುಲಪತಿ ಮಾಡಿರುವ ಆದೇಶವನ್ನು ಹೈಕೋರ್ಟ್ ಮಂಗಳವಾರ ಊರ್ಜಿತಗೊಳಿಸಿದೆ.

2010ರ ಮೇ 27ರಂದು ಇವರನ್ನು ಪ್ರಥಮ ಕುಲಪತಿಗಳನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಮೇಲುಕೋಟೆ ಸಂಸ್ಕೃತ ಅಕಾಡೆಮಿಯ ನಿವೃತ್ತ ರಿಜಿಸ್ಟ್ರಾರ್ ಕೃಷ್ಣಪ್ರಸಾದ್ ಅವರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ನೇತೃತ್ವದ   ವಿಭಾಗೀಯ ಪೀಠ ವಜಾ ಮಾಡಿದೆ.

ಇವರಿಗೆ ಸೂಕ್ತ ಅರ್ಹತೆ ಇಲ್ಲ ಎನ್ನುವುದು ಅರ್ಜಿದಾರರ ವಾದವಾಗಿತ್ತು. ಆದರೆ ಸಂಸ್ಕೃತ ವಿಶ್ವವಿದ್ಯಾಲಯದ ಕಾಯ್ದೆಯ 68ನೇ ಕಲಮಿನ ಪ್ರಕಾರ, ಈ ವಿವಿಯ ಕುಲಪತಿ ಸ್ಥಾನಕ್ಕೆ ಉಳಿದ ವಿವಿಯ ಕುಲಪತಿ ಹುದ್ದೆಗೆ ಇರುವ ಅರ್ಹತೆಗಳಿಂದ ವಿನಾಯಿತಿ ನೀಡಲಾಗಿದೆ. ಅಷ್ಟೇ ಅಲ್ಲದೆ ಪ್ರಥಮ ಕುಲಪತಿಗಳಾಗಿ ನೇಮಕಗೊಳ್ಳುವವರಿಗೆ ಕೆಲವೊಂದು ಸಡಿಲಿಕೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಅವರ ಪರ ವಕೀಲರು ಕೋರ್ಟ್ ಗಮನಕ್ಕೆ ತಂದ ಹಿನ್ನೆಲೆಯಲ್ಲಿ, ಅರ್ಜಿಯನ್ನು ವಜಾ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT