ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಷ್ಟಗಿ: ಉಚಿತ ನೇತ್ರ ಶಸ್ತ್ರಚಿಕಿತ್ಸೆ ಶಿಬಿರ

Last Updated 11 ಅಕ್ಟೋಬರ್ 2011, 8:45 IST
ಅಕ್ಷರ ಗಾತ್ರ

ಕುಷ್ಟಗಿ: ಪಟ್ಟಣದಲ್ಲಿ ಸೊಮವಾರ ರಕ್ಷಣಾವೇದಿಕೆ (ಟಿಎಎನ್) ಬಣದ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಆರಂಭಗೊಂಡಿದ್ದು ಸಾರ್ವಜನಿಕ ಆಸ್ಪತ್ರೆಯಲ್ಲಿ ನೂರಕ್ಕೂ ಅಧಿಕ ಜನರಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಅಂಧತ್ವ ವಿಭಾಗ, ಬೆಂಗಳೂರಿನ ಪ್ರಾಜೆಕ್ಟ್ ದೃಷ್ಟಿ ಸೋಲಂಕಿ ಕಣ್ಣಾಸ್ಪತ್ರೆ ಹಾಗೂ ತಾವರಗೇರಾದ ಬೆಳಕು ಸೇವಾ ಸಂಸ್ಥೆ ಹಾಗೂ ಸ್ಥಳೀಯ ಸಾರ್ವಜನಿಕ ಆಸ್ಪತ್ರೆ ವೈದ್ಯರ ಸಹಕಾರದೊಂದಿಗೆ ಹೊಲಿಗೆ ರಹಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಲೆನ್ಸ್ (ಐಒಎಲ್) ಅಳವಡಿಸುವ ಶಿಬಿರ ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಸಹ ತಪಾಸಣೆ ನಡೆಯಲಿದೆ ಎಂದು ತಿಳಿಸಲಾಗಿದೆ.

ಶಿಬಿರದ ಸಮಾರೋಪ ಕಾರ್ಯಕ್ರಮ ಅ.11ರಂದು ಸಂಜೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆಯಲಿದ್ದು ವೈದ್ಯರು, ಚುನಾಯಿತ ಪ್ರತಿನಿಧಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗಹಿಸುವರು ಎಂದು ಕರವೇ ಜಿಲ್ಲಾಧ್ಯಕ್ಷ ಬಸನಗೌಡ ಪಾಟೀಲ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT