ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸಿಯುತ್ತಿರುವ ಮಾನವೀಯ ಮೌಲ್ಯ

Last Updated 23 ಸೆಪ್ಟೆಂಬರ್ 2011, 9:05 IST
ಅಕ್ಷರ ಗಾತ್ರ

ಹೊಳೆನರಸೀಪುರ: `ದೇಶ ಆಧುನಿಕತೆಗೆ ತೆರೆದುಕೊಂಡಿದ್ದರೂ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಮಹಿಳೆ ಅಬಲೆ ಎನ್ನುವ ರೀತಿಯಲ್ಲಿ ಇಂದಿಗೂ ಸಹ ನೋಡಲಾಗುತ್ತಿದೆ~ ಎಂದು ಹಾಸನ ಸರ್ಕಾರಿ ಕಲಾ ಕಾಲೇಜಿನ ಸ್ನಾತಕೋತರ ಸಮಾಜ ಶಾಸ್ತ್ರ ಅಧ್ಯಯನ ವಿಭಾಗದ ಡಾ. ಲೆಷ್ಟಿನೆಂಟ್ ಜಿ.ಡಿ. ನಾರಾಯಣ ನುಡಿದರು.

ಗುರುವಾರ ಇಲ್ಲಿನ ಮಹಿಳಾ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನಲ್ಲಿ ನಡೆದ “ಆಧುನಿಕ ಮಹಿಳೆಯ ಸಂದಿಗ್ಧತೆಗಳು” ಎಂಬ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪುರುಷ ಪ್ರಧಾನವಾದ ಈ ಸಮಾಜದಲ್ಲಿ ಮಹಿಳೆ ಯರು ಉತ್ತಮ ಹಾಗೂ ಗೌರವದ ಜೀವನ ನಡೆಸ ಬೇಕೆಂದರೆ ಎಂತಹ ಸಮಸ್ಯೆಗಳನ್ನಾದರೂ ಧೈರ್ಯ ವಾಗಿ ಎದುರಿಸಬೇಕೆ ವಿನಃ ಹೆದರಿ ಆತ್ಮಹತ್ಯೆಯಂತಹ ಪ್ರಯತ್ನಕ್ಕೆ ಕೈ ಹಾಕಬಾರದು ಎಂದು ಹೇಳಿದರು.

ಪ್ರೊ.ಚಂದ್ರಕುಮಾರ್ ಮಾತನಾಡಿ, ವಿದ್ಯಾರ್ಥಿನಿ ಯರು ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿ ಚೆನ್ನಾಗಿ ಅಧ್ಯಯನ ಮಾಡಬೇಕು. ಬೇರೆ ಆಕರ್ಷಣೆಗಳಿಗೆ ಒಳಗಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ನುಡಿದರು.

ಜಿ.ಪಂ. ಸದಸ್ಯೆ ಮಂಜುಳಾ ಬೈರಾಜು ಮಾತನಾಡಿ, ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಉತ್ತಮವಾದ ಸಾಧನೆ ಮಾಡಿ ಎಂದು ಹಾರೈಸಿದರು.

ಉಪನ್ಯಾಸಕ ಶಿವರಾಮೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕುಮಾರಿ ಸರಸ್ವತಿ ಕಾರ್ಯಕ್ರಮ ನಿರೂಪಿಸಿದಳು. ಶ್ರುತಿ ಸ್ವಾಗತಿಸಿ ವಿನುತಾ   ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT