ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸ್ತಿ: ಸಮಬಲದ ಹೋರಾಟ

Last Updated 8 ಜೂನ್ 2012, 19:30 IST
ಅಕ್ಷರ ಗಾತ್ರ

ಗದಗ: ಮಹಾರಾಷ್ಟ್ರದ ಸಂಜಯ ಹಾಗೂ ಜಮಖಂಡಿಯ ಅಪ್ಪಾಜಿ ನಡುವೆ ನಗರದಲ್ಲಿ ಶುಕ್ರವಾರ ನಡೆದ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯ ಪುರುಷರ ಫೈನಲ್ ಪಂದ್ಯವು ಸಮಬಲದ ಹೋರಾಟದೊಂದಿಗೆ ಅಂತ್ಯಗೊಂಡಿತು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರ ಅಭಿಮಾನಿಗಳ ಬಳಗ ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ, ಜಿಲ್ಲಾ ಕುರುಬರ ಸಂಘ ಹಾಗೂ ಜಿಲ್ಲಾ ಕುಸ್ತಿ ಸಂಸ್ಥೆ ಆಶ್ರಯದಲ್ಲಿ ಈ ಕುಸ್ತಿ ಪಂದ್ಯವನ್ನು ಏರ್ಪಡಿಸಿತ್ತು. ನಿಗದಿತ ಅವಧಿಯಲ್ಲಿ ಯಾರೊಬ್ಬರು ಗೆಲುವು ಸಾಧಿಸಲು ಸಾಧ್ಯವಾಗದ ಕಾರಣ ಪಂದ್ಯ ಡ್ರಾ ದಲ್ಲಿ ಅಂತ್ಯಗೊಂಡಿತು. ಇಬ್ಬರಿಗೂ ತಲಾ 25 ಸಾವಿರ ರೂಪಾಯಿ ನಗದು ಬಹುಮಾನ ನೀಡಲಾಯಿತು. 18 ವರ್ಷದೊಳಗಿನ ಮಹಿಳಾ ಕುಸ್ತಿ ಪಂದ್ಯಾವಳಿಯಲ್ಲಿ ಅಸುಂಡಿಯ ಪ್ರೇಮಾ ವೆಂಕಟಾಪುರದ ಶಮೀದಾ ವಿರುದ್ಧ ಗೆಲುವು ಸಾಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT