ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಡುಂಕುಳಂ: `ಇನ್ನೆರಡು ದಿನಗಳಲ್ಲಿ ವಿದ್ಯುತ್ ಉತ್ಪಾದನೆ'

Last Updated 12 ಜುಲೈ 2013, 19:59 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಕೂಡುಂಕುಳಂ ಪರಮಾಣು ವಿದ್ಯುತ್ ಯೋಜನೆಯ (ಕೆಎನ್‌ಪಿಪಿ) ಸ್ಥಾವರದಲ್ಲಿ ಪರಮಾಣು ವಿದಳನಕ್ಕೆ ಅಣು ಶಕ್ತಿ ನಿಯಂತ್ರಣ ಪ್ರಾಧಿಕಾರ (ಎಇಆರ್‌ಬಿ) ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇನ್ನೆರಡು ದಿನಗಳಲ್ಲಿ ವಿದ್ಯುತ್ ಉತ್ಪಾದನಾ ಕಾರ್ಯ ಆರಂಭವಾಗಲಿದೆ ಎಂದು ಪ್ರಧಾನಿ ಕಾರ್ಯಾಲಯದ ಸಚಿವ ವಿ.ನಾರಾಯಣಸ್ವಾಮಿ ತಿಳಿಸಿದರು.

ಪರಮಾಣು ವಿದ್ಯುತ್ ಯೋಜನೆ  ವಿರೋಧಿ ಜನಾಂದೋಲನವು (ಪಿಎಂಎಎನ್‌ಇ) ಕೂಡುಂಕುಳಂ ಯೋಜನೆ ವಿರುದ್ಧ ನಡೆದ ಪ್ರತಿಭಟನೆಯ ಅರ್ಥಹೀನ. ಇದರಿಂದ ಯೋಜನೆ ಕಾರ್ಯಾರಂಭವು ವಿಳಂಬಗೊಂಡು ಕೇಂದ್ರಕ್ಕೆ ಎರಡು ಸಾವಿರ ಕೋಟಿ ರೂಪಾಯಿ ಅನಗತ್ಯವಾಗಿ ನಷ್ಟವಾಯಿತು ಎಂದು ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಹೇಳಿದರು.

ಪಿಎಂಎಎನ್‌ಇ ಪ್ರತಿಭಟನಾಕಾರರು ಅಣು ಸ್ಥಾವರದ ಸುರಕ್ಷತೆಯ ಬಗ್ಗೆ ಸ್ಥಳೀಯರಿಗೆ ತಪ್ಪು ಮಾಹಿತಿ ನೀಡಿದರು. ಸುರಕ್ಷತೆಯನ್ನು ಖಾತರಿ ಪಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಜ್ಞರ ಸಮಿತಿಯನ್ನು ರಚಿಸಬೇಕಾಯಿತು. ಈ ಮಧ್ಯೆ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರೂ ಸುರಕ್ಷತೆಯನ್ನು ದೃಢಿಕರಿಸಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT