ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಡುಂಕುಳಂಗೆ ಬ್ರಿಟನ್‌ನಲ್ಲಿ ವಿರೋಧ

Last Updated 19 ಮೇ 2012, 19:30 IST
ಅಕ್ಷರ ಗಾತ್ರ

ಲಂಡನ್ (ಪಿಟಿಐ): ತಮಿಳುನಾಡಿನ ಸುನಾಮಿ ಸಂಭಾವ್ಯ ಪ್ರದೇಶವಾದ ಕೂಡುಂಕುಳಂನಲ್ಲಿ ನಿರ್ಮಿಸಲಾಗುತ್ತಿರುವ ಅಣು ವಿದ್ಯುತ್ ಸ್ಥಾವರ ವಿರೋಧಿಸಿರುವ ಬ್ರಿಟನ್‌ನ ಕೆಲ ಜನಪ್ರತಿನಿಧಿಗಳು ಈ ಸಂಬಂಧ ಪ್ರಧಾನಮಂತ್ರಿ ಡಾ. ಮನಮೋಹನ ಸಿಂಗ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಪತ್ರ ಬರೆದು ಎಚ್ಚರಿಸಿದ್ದಾರೆ.

ಸುನಾಮಿ ಸಂಭಾವ್ಯ ಪ್ರದೇಶದ ವ್ಯಾಪ್ತಿಗೆ ಒಳಪಡುವ ಈ ಸ್ಥಾವರ ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (ಐಎಇಎ)ಯ ಸುರಕ್ಷಾ ನಿರ್ದೇಶನಗಳನ್ನು ಉಲ್ಲಂಘಿಸಿದ್ದು, ಸ್ಥಾವರ ನಿರ್ಮಾಣವಾದಲ್ಲಿ ಈ ಭಾಗದಲ್ಲಿ ನೀರಿಗೆ ತೀವ್ರ ಬರ ಉಂಟಾಗಲಿದೆ ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

ಈ ಸಂಬಂಧ ಲಂಡನ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು ಎಂದು ಸೌತ್ ಏಷಿಯಾ ಸಾಲಿಡಾರಿಟಿ ಗ್ರೂಪ್‌ನ ಅಮೃತ್ ವಿಲ್ಸನ್ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT