ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ: ಪಿಎಲ್‌ಡಿ ಬ್ಯಾಂಕ್ ಮುಖ್ಯ ಪಾತ್ರ

Last Updated 21 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: `ತಾಲ್ಲೂಕಿನ ಕೃಷಿ ಕ್ಷೇತ್ರದ ಪ್ರಗತಿಯಲ್ಲಿ ಪಿಎಲ್‌ಡಿ ಬ್ಯಾಂಕ್ ಮುಖ್ಯಪಾತ್ರ ವಹಿಸುತ್ತಿದೆ. ಈ ನಿಟ್ಟಿನಲ್ಲಿ ಬ್ಯಾಂಕಿನ ಎಲ್ಲಾ ಷೇರುದಾರರ ಸಹಕಾರ ಮುಖ್ಯ~ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ ಹೇಳಿದರು.

ಅವರು ನಗರದ ಪಿಎಲ್‌ಡಿ ಬ್ಯಾಂಕ್ ಆವರಣದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

`2010-11ನೇ ಸಾಲಿನಲ್ಲಿ 1.76 ಕೋಟಿ ರೂಗಳಷ್ಟು ಸಾಲ ವಿತರಣೆ ಮಾಡಲಾಗಿದೆ. 10 ಟ್ರಾಕ್ಟರ್‌ಗಳ ಖರೀದಿಗೆ ಸಾಲ, 50 ಎಕರೆ ಪ್ರದೇಶದಲ್ಲಿ ದ್ರಾಕ್ಷಿ ಕೃಷಿ ಕೈಗೊಳ್ಳುಲು ಸಾಲ, ಕೋಳಿ ಸಾಕಾಣಿಕೆ ಹಾಗೂ ಹೈನುಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಾಲ ನೀಡಲಾಗಿದೆ. ಈ ವರ್ಷ ಬ್ಯಾಂಕಿನ ಸಾಲ ವಸೂಲಾತಿಯಲ್ಲಿ ಉತ್ತಮ ಸಾಧನೆ ಮಾಡಲಾಗಿದ್ದು, ಶೇ.60ರಷ್ಟು ವಸೂಲಾತಿಯಾಗಿದೆ. ಶೇ.3ರ ಬಡ್ಡಿ ದರ ಸೇರಿದಂತೆ ವಿವಿಧ ಯೋಜನೆಗಳಲ್ಲಿ ರೈತರು ಪಡೆದಿರುವ ಸಾಲವನ್ನು ಸಕಾಲದಲ್ಲಿ ಹಿಂದಿರುಗಿಸುವ ಮೂಲಕ ಇತರೆ ರೈತರು ಸೌಲಭ್ಯಗಳನ್ನು ಪಡೆಯಲು ಅನುಕೂಲ ಕಲ್ಪಿಸಬೇಕು~ ಎಂದು ಹೇಳಿದರು.

ಸರ್ವ ಸದಸ್ಯರ ಸಭೆಯಲ್ಲಿ ಬ್ಯಾಂಕಿನ ವ್ಯವಸ್ಥಾಪಕ ಎಸ್.ಪಿ.ಮರಿಬಸಪ್ಪ, ನಿರ್ದೇಶಕರಾದ ಎನ್.ಹನುಮಂತೇಗೌಡ, ವೆಂಕಟೇಶ್‌ಬಾಬು ಮುಂತಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT