ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಬಜೆಟ್ ಅನಗತ್ಯ

Last Updated 2 ಫೆಬ್ರುವರಿ 2011, 19:00 IST
ಅಕ್ಷರ ಗಾತ್ರ

ಮಡಿಕೇರಿ: ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿಗಳು ಹೇಳಿಕೆ ನೀಡಿರುವುದು ಜನರಿಗೆ ಮಂಕು ಬೂದಿ ಎರಚುವ ತಂತ್ರವಷ್ಟೇ. ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಬೇಕಾದರೆ ಅದಕ್ಕೆ ಪ್ರತ್ಯೇಕವಾದ ವರಮಾನ- ಖರ್ಚು ತೋರಿಸಬೇಕು. ಆದರೆ, ಕೃಷಿಯಲ್ಲಿ ವರಮಾನ ಎಲ್ಲಿದೆ? ಹೀಗಾಗಿ ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಿದರೂ ಅದರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಪ್ರತಿಪಾದಿಸಿದರು.

ಕೊಡಗು ಜಿಲ್ಲಾ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಬಿ.ಟಿ. ಪ್ರದೀಪ್ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ  ಪಾಲ್ಗೊಂಡು ಅವರು ಮಾತನಾಡಿದರು.

‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮೇಲೆ ಎರಡು ತೂಗುಕತ್ತಿ ನೇತಾಡುತ್ತಿರುವುದರಿಂದ ಯಾವುದೇ ಸಮಯದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ಎದುರಾದರೂ ಅಚ್ಚರಿ ಪಡುವಂತಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT