ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಭೂಮಿಯ ಸಮರ್ಪಕ ಸದ್ಬಳಕೆ ಅಗತ್ಯ

Last Updated 21 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಶರವೇಗದಲ್ಲಿ ಬೆಳೆಯುತ್ತಿರುವ ಜನಸಂಖ್ಯೆಯ ಆಹಾರ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೃಷಿ ಭೂಮಿಯನ್ನು ಸಮರ್ಪಕವಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ವಿ. ರಾಜಶೇಖರನ್ ಶುಕ್ರವಾರ ಇಲ್ಲಿ ಅಭಿಪ್ರಾಯಪಟ್ಟರು.

ಭಾರತೀಯ ಆರ್ಥಿಕ ಸಂಸ್ಥೆ ಹಾಗೂ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಮಹಿಳಾ ಕಾಲೇಜಿನ ಸಾಮಾಜಿಕ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ `ಭಾರತದಲ್ಲಿ ಜಾಗತೀಕರಣ ಮತ್ತು ಕೃಷಿ ಭೂಮಿ ಬಳಕೆ~ ಕುರಿತ ವಿಚಾರ ಸಂಕಿರಣದ ಸಮಾರೋಪದಲ್ಲಿ ಅವರು ಮಾತನಾಡಿದರು.

`1951ರಲ್ಲಿ ಕೇವಲ 36 ಕೋಟಿಯಷ್ಟಿದ್ದ ದೇಶದ ಜನಸಂಖ್ಯೆ, 2011ರ ವೇಳೆಗೆ 120 ಕೋಟಿ ತಲುಪಿದೆ. ಅಂತೆಯೇ, 329 ದಶಲಕ್ಷ ಹೆಕ್ಟೇರ್ ಕೃಷಿ ಭೂಮಿ ಪೈಕಿ ಪ್ರಸ್ತುತ 141 ದಶಲಕ್ಷ ಹೆಕ್ಟೇರ್ ಭೂಮಿಯನ್ನು ಮಾತ್ರ ಕೃಷಿಗೆ ಬಳಸಲು ಸಾಧ್ಯವಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನ 371 ದಶಲಕ್ಷ ಮಂದಿ ಪೌಷ್ಠಿಕ ಆಹಾರದ ಕೊರತೆಯಿಂದ ನರಳುತ್ತಿದ್ದಾರೆ.

ಇಂತಹ ಸನ್ನಿವೇಶದಲ್ಲಿ ಕೃಷಿ ಭೂಮಿ ಪ್ರಮಾಣ ಕಡಿಮೆಯಾಗದಂತೆ ನೋಡಿಕೊಳ್ಳಬೇಕಾಗಿದೆ~ ಎಂದರು.
ಕರ್ನಾಟಕ ರೆಡ್ ಕ್ರಾಸ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಡಾ.ಎನ್.ಜಿ. ನಾರಾಯಣ, ನಿವೃತ್ತ ಡಿಜಿಪಿ ಡಾ. ಜೀಜಾಹರಿಸಿಂಗ್ ಮಾತನಾಡಿದರು. ಸ್ಥಳೀಯ ಸಂಘಟಕರಾದ ಡಾ. ರೇಖಾ ಜಗನ್ನಾಥ್, ಪ್ರೊ. ಭಾರತಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT