ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕೃಷಿ ಉತ್ಪನ್ನಗಳ ದರದಲ್ಲಿ ಏರಿಳಿಕೆಯಾದ ಸಂದರ್ಭದಲ್ಲಿ ನೆರವಾಗುವ ಉದ್ದೇಶದಿಂದ ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಉದ್ದೇಶಿಸಿದೆ. ಈ ಕಾಯ್ದೆಯನ್ನು ಜಾರಿಗೊಳಿಸುವುದರಿಂದ ಶೇ 60ರಷ್ಟು ರೈತರಿಗೆ ಹಾಗೂ ಶೇ 40ರಷ್ಟು ಬಡವರಿಗೆ ಅನುಕೂಲವಾಗಲಿದೆ. ಈ ಸಂಬಂಧ ಪ್ರತ್ಯೇಕ ನಿಧಿಯೊಂದನ್ನು ಸ್ಥಾಪಿಸಲಾಗುತ್ತದೆ ಎಂದು ಎಂದು ತಿಳಿಸಿದರು.ಕೃಷಿ ಉತ್ಪನ್ನಗಳ ಮಾರಾಟ ಸಂದರ್ಭದಲ್ಲಿ ಪ್ರಮುಖ ಪಾತ್ರ ವಹಿಸುವ ಮಧ್ಯವರ್ತಿಗಳನ್ನು ತಡೆಗಟ್ಟುವುದು ಕೇಂದ್ರ ಸರ್ಕಾರದ ಕೆಲಸವಲ್ಲ. ಅದನ್ನು ಸ್ಥಳೀಯ ಆಡಳಿತ ವ್ಯವಸ್ಥೆ ನಿಭಾಯಿಸಬೇಕು ಎಂಬ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.