ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾ, ಮಲಪ್ರಭೆಗೆ ನೀರು ಬಿಡಲು ಆಗ್ರಹ

Last Updated 3 ಜುಲೈ 2013, 8:24 IST
ಅಕ್ಷರ ಗಾತ್ರ

ಕೂಡಲಸಂಗಮ: ಕೃಷ್ಣ, ಮಲಪ್ರಭೆ ನದಿಗಳ ಸಂಗಮವಾದ ಸುಕ್ಷೇತ್ರ ಕೂಡಲಸಂಗಮದ ಬಳಿ ನದಿಯಲ್ಲಿ ನೀರು ಇರದೇ ಕೂಡಲಸಂಗಮಕ್ಕೆ ಬರುವ ಪ್ರವಾಸಿಗರು, ಸುತ್ತಮುತ್ತಲಿನ ಗ್ರಾಮದ ರೈತರು ತೊಂದರೆ ಅನುಭವಿಸುತ್ತಿರುವರು ಈ ಕುರಿತು ಕೂಡಲಸಂಗಮ ಹಾಗೂ ಸುತ್ತಮುತ್ತಲಿನ ಗ್ರಾಮದ ರೈತ ಮುಖಂಡರು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿಯವರನ್ನು ಭೇಟಿಮಾಡಿ ವಿಷಯ ತಿಳಿಸಿದ ಕೂಡಲೇ ಶ್ರೀಗಳು ಕೂಡಲಸಂಗಮದ ಸಂಗಮೇಶ್ವರ ದೇವಾಲಯದ ಬಳಿ ಇರುವ ಕೃಷ್ಣಾ ಹಾಗೂ ಮಲಪ್ರಭಾ ನದಿಗಳನ್ನು ವಿಕ್ಷಿಸಿ ರೈತರೊಂದಿಗೆ ಚರ್ಚಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಈಗಾಗಲೇ ಬೆಳಗಾವಿ, ಮಹಾರಾಷ್ಟ್ರದಲ್ಲಿ ಮಳೆ ಸುರಿದ ಪರಿಣಾಮ ಕೃಷ್ಣಾ ನದಿಗೆ ಅಧಿಕ ಪ್ರಮಾಣದಲ್ಲಿ ನಿತ್ಯ ನೀರು ಹರಿದು ಬರುತ್ತಿರುವುದು.

ಆದರೆ ಆಲಮಟ್ಟಿ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡದೆ ಇರುವುದು ಮತ್ತು ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡದೆ ಇರುವುದರಿಂದ ಹುನಗುಂದ ಹಾಗೂ ಬಾಗಲಕೋಟೆ, ಮುದ್ದೇಬಿಹಾಳ ತಾಲ್ಲೂಕಿನ 100ಕ್ಕೂ ಅಧಿಕ ಗ್ರಾಮದ ರೈತರು ವ್ಯವಸಾಯ ಮಾಡಲು ತೊಂದರೆ ಉಂಟಾಗಿದೆ, ಸದ್ಯ ಮಳೆಯು ಬರದೇ ಇರುವುದು, ನದಿಯಲ್ಲಿ ನೀರು ಇರದೇ ಇರುವುದರಿಂದ ಈ ಭಾಗದ ರೈತರು ಆತಂಕಕ್ಕೆ ಒಳಗಾಗಿರುವರು. ಜೊತೆಗೆ ಕೂಡಲಸಂಗಮಕ್ಕೆ ಕಳೆದ ನಾಲ್ಕು ತಿಂಗಳಿಂದ ಬರುವ ಪ್ರವಾಸಿಗರು ನದಿಯಲ್ಲಿ ನೀರು ಇರದೇ ಇರುವುದರಿಂದ  ಅನಿವಾರ್ಯವಾಗಿ ತಾತ್ಕಾಲಿಕ ಸ್ನಾನ ಘಟದಲ್ಲಿ ಸ್ನಾನ ಮಾಡಿ ಹೋಗುತ್ತಿರುವರು.

ಇಷ್ಟು ದಿನ ಆಲಮಟ್ಟಿ ಜಲಾಶಯದಲ್ಲಿ ನೀರು ಇರಲಿಲ್ಲ. ಆದರಿಂದ ಸಮಸ್ಯೆ ಉಂಟಾಗಿತ್ತು. ಆದರೆ15 ದಿನಗಳಿಂದ ಆಲಮಟ್ಟಿ ಜಲಾಶಯಕ್ಕೆ ಅಧಿಕ ಪ್ರಮಾಣದಲ್ಲಿ ನೀರು ಬರುತ್ತಿದ್ದರೂ ಜಲಾಶಯದಿಂದ ನೀರು ಬಿಡದೆ ಇರುವುದರಿಂದ ಈ ಭಾಗದ ಸಾವಿರಾರು ರೈತರಿಗೆ ಕೂಡಲಸಂಗಮಕ್ಕೆ ಬರುವ ಪ್ರವಾಸಿಗರಿಗೆ ನಿರಾಶೆ ಆಗಿದೆ. ನದಿಗೆ ನೀರು ಬಿಡುವಂತೆ ಮೇಲಾಧಿಕಾರಿಗಳಿಗೆ ತಿಳಿಸುವಂತೆ, ಸ್ಥಳೀಯ ಶಾಸಕರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತನಾಡಿ ನದಿಗೆ ನೀರು ಬಿಡುವಂತೆ ಮಾಡಲಾಗುತ್ತದೆ ಎಂದು ಹೇಳಿದರು.

ರಾಜ್ಯ ಸಹಕಾರಿ ಮಹಾಮಂಡಳದ ನಿರ್ದೇಶಕ ಎಲ್. ಎಂ.ಪಾಟೀಲ, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡ್ಡಮನಿ, ರೈತ ಸಿದ್ದು ಸಾರಂಗಮಠ, ಪ್ರಭು ಹಿರೇಮಠ, ತಾಲ್ಲೂಕು ಪಂಚಾಯ್ತಿ ಸದಸ್ಯ ಮುತ್ತಣ್ಣ ಭಜಂತ್ರಿ, ಗ್ರಾಮ ಪಂಚಾಯ್ತಿ ಸದಸ್ಯ ಶೇಖಪ್ಪ ದೇಶಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮಲ್ಲಪ್ಪ ಬಾಗೇವಾಡಿ, ಹಾಲು ಉತ್ಪಾದಕ ಸಹಕಾರಿ ಸಂಘದ ನಿರ್ದೇಶಕ ಸಂಗಣ್ಣ ಬಾಗೇವಾಡಿ, ಶಂಕರಗೌಡ ಗೌಡರ, ಅನಿಲ ಗೌಡರ, ಅಶೋಕ ಗೌಡರ, ರುದ್ರಪ್ಪ ಬೂದುರಿ, ಕೆ.ಆರ್. ದೇಶಪಾಂಡೆ, ಎಸ್.ಪಿ. ಬೂದೂರಿ, ನಾಗರಾಜ ಚೌಧರಿ ಮುಂತಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT