ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾನದಿ ನೀರಿನ ಮಟ್ಟದಲ್ಲಿ ಇಳಿಕೆ

Last Updated 9 ಸೆಪ್ಟೆಂಬರ್ 2011, 10:10 IST
ಅಕ್ಷರ ಗಾತ್ರ

ಬೆಳಗಾವಿ: ಕೃಷ್ಣಾ ಹಾಗೂ ಉಪನದಿಗಳ ನೀರಿನ ಹರಿವಿಕೆಯಲ್ಲಿ ಇಳಿಕೆ ಯಾಗಿದೆ. ಮಹಾರಾಷ್ಟ್ರದಿಂದ ಹರಿದು ಬರುತ್ತಿದ್ದ ನೀರಿನ ಪ್ರಮಾಣ ದಲ್ಲಿ 64 ಸಾವಿರ ಕ್ಯೂಸೆಕ್‌ನಷ್ಟು ನೀರು ಕಡಿಮೆಯಾಗಿದೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜಿನಿಂದ 1.63 ಲಕ್ಷ ಕ್ಯೂಸೆಕ್ ಹರಿದು ಬರುತ್ತಿದೆ. ಜಿಲ್ಲೆಯಲ್ಲಿ ಬುಧವಾರ ಸುರಿದಿದ್ದ ಮಳೆಯಿಂದಾಗಿ ಹಿರಣ್ಯಕೇಶಿ ಹಾಗೂ ಮಲಪ್ರಭಾ ನದಿ ನೀರಿನ ಹರಿವಿನಲ್ಲಿ ಅಲ್ಪ ಏರಿಕೆ ಕಂಡು ಬಂದಿದೆ.

ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಯಾಗಿದೆ. ಚಿಕ್ಕೋಡಿ ತಾಲ್ಲೂಕಿನಲ್ಲಿ ಒಂಬತ್ತು, ಅಥಣಿ ತಾಲ್ಲೂಕಿನಲ್ಲಿ ಐದು, ಖಾನಾಪುರ ಹಾಗೂ ರಾಯಬಾಗ ತಾಲ್ಲೂಕಿನಲ್ಲಿ ಎರಡು, ಗೋಕಾಕ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ತಲಾ ಒಂದು ಸೇತುವೆ ಮುಳುಗಡೆಯಾಗಿವೆ.

ಬೆಳಗಾವಿ ತಾಲ್ಲೂಕಿನಲ್ಲಿ 26, ಖಾನಾಪುರ ತಾಲ್ಲೂಕಿನ 28, ಹುಕ್ಕೇರಿ ತಾಲ್ಲೂಕಿನಲ್ಲಿ ಎಂಟು ಮನೆಗಳು ಭಾಗಶಃ ಹಾನಿಗೆ ಒಳಗಾ ಗಿವೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 311 ಮನೆಗಳು ಭಾಗಶಃ ಹಾನಿಗೆ ಈಡಾಗಿವೆ. ಖಾನಾಪುರದಲ್ಲಿ ಬುಧವಾರ ಮಳೆ ಹೆಚ್ಚಾಗಿದ್ದರಿಂದ ಅಸೋಗಾ ಸೇತುವೆ ಹಾಗೂ ಹುಕ್ಕೇರಿ ತಾಲ್ಲೂಕಿನಲ್ಲಿ ಸುಲ್ತಾನಪುರ ಸೇತುವೆ ಮತ್ತೆ ನೀರಿನಲ್ಲಿ ಮುಳಗಿವೆ.

ಚಿಕ್ಕೋಡಿ ವರದಿ: ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ್ದದ್ದರಿಂದ ಕೃಷ್ಣಾ ನದಿಯಲ್ಲಿ ಇಳಿಕೆ ಕಂಡು ಬಂದಿದೆ. ಮಹಾರಾಷ್ಟ್ರದ ಕೊಯ್ನಾದಲ್ಲಿ 57ಮಿ.ಮೀ, ನವಜಾದಲ್ಲಿ 77 ಮಿ.ಮೀ, ಮಹಾಬಳೇಶ್ವರದಲ್ಲಿ 83 ಮಿ.ಮೀ, ವಾರಣಾದಲ್ಲಿ 35ಮಿ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT