ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ. ಗೊಲ್ಲಹಳ್ಳಿ: ಪ್ರಾಥಮಿಕ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ

Last Updated 28 ಅಕ್ಟೋಬರ್ 2011, 18:45 IST
ಅಕ್ಷರ ಗಾತ್ರ

 ರಾಜರಾಜೇಶ್ವರಿನಗರ:  ಸಮಾಜದಲ್ಲಿ ತುಳಿತಕ್ಕೆ ಒಳಗಾದ ನೊಂದ, ದುರ್ಬಲ ಹಾಗೂ ಹಿಂದುಳಿದ ಜನಾಂಗದ ಮಕ್ಕಳಿಗೆ ಶಿಕ್ಷಣ ದೊರಕಿಸಿಕೊಡುವ ಮೂಲಕ ತಮ್ಮ ಜೀವನ ಸಾರ್ಥಕಪಡಿಸಿಕೊಳ್ಳಬೇಕಾಗಿದೆ ಎಂದು  ಜಿ.ಪಂ.ಸದಸ್ಯ ಎ.ಶಿವಕುಮಾರ್ ಅಭಿಪ್ರಾಯಪಟ್ಟರು.

 ಕೆ.ಗೊಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಮಕ್ಕಳಿಗೆ ಸೈಕಲ್‌ಗಳನ್ನು ವಿತರಿಸಿ ಅವರು ಮಾತನಾಡಿದರು.

`ಶಿಕ್ಷಣದ ಜೊತೆಗೆ ಸಂಸ್ಕೃತಿ, ಭಾಷಾಭಿಮಾನ, ಮಾನವೀಯ ಮೌಲ್ಯ, ದೇಶದಲ್ಲಿ ಬೇರೂರಿರುವ ಜಾತೀಯತೆ , ಭ್ರಷ್ಟಾಚಾರ ತೊಲಗಿಸುವ ವಿಷಯಗಳನ್ನು ಮಕ್ಕಳಿಗೆ ತಿಳಿ ಹೇಳುವ ಮೂಲಕ ಶಿಕ್ಷಕರು ಬಲಿಷ್ಠ ಭಾರತ ನಿರ್ಮಾಣಕ್ಕೆ ಮುಂದಾಗಬೇಕು~ ಎಂದು ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ.ರಾಮಚಂದ್ರ ಕರೆ ನೀಡಿದರು.

ತಾ.ಪಂ. ಮಾಜಿ ಅಧ್ಯಕ್ಷ ಕೆ.ವಿ.ಕೃಷ್ಣಪ್ಪ, ತಾ.ಪಂ. ಸದಸ್ಯೆ ಪ್ರಮೀಳಾ ಮಂಜುನಾಥ್, ಗ್ರಾ.ಪಂ. ಅಧ್ಯಕ್ಷ ಬೆಟ್ಟಯ್ಯ, ಉಪಾಧ್ಯಕ್ಷ ಸಂಪತ್‌ರಾಜು ಮುಖಂಡರಾದ ಕೆ.ವೈ.ಶಿವಣ್ಣ, ಬಸವರಾಜು, ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT