ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪೇಗೌಡ ಹೆಸರು: ಸಂಭ್ರಮ

Last Updated 17 ಜುಲೈ 2013, 19:45 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅವರ ಹೆಸರಿನ್ನಿಡುವ ಕೇಂದ್ರ ಸಚಿವ ಸಂಪುಟದ ನಿರ್ಣಯ ಹೊರ ಬೀಳುತ್ತಿದ್ದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬಿಬಿಎಂಪಿ ಕಚೇರಿ ಮುಂಭಾಗ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಮಾತನಾಡಿ, `ನಮ್ಮ ಹಲವು ವರ್ಷಗಳ ಹೋರಾಟಕ್ಕೆ ಇದೀಗ ಗೆಲುವು ಸಿಕ್ಕಿದೆ. ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡುವ ಮೂಲಕ ಕೇಂದ್ರ ಸರ್ಕಾರ ಬೆಂಗಳೂರು ಶಿಲ್ಪಿ ಕೆಂಪೇಗೌಡರಿಗೆ ಸೂಕ್ತ ಗೌರವ ತೋರಿದಂತಾಗಿದೆ' ಎಂದರು.
ವೇದಿಕೆ ಪ್ರಧಾನ ಕಾರ್ಯದರ್ಶಿ ಸಣ್ಣೀರಪ್ಪ, ಮುಖಂಡರಾದ ಅಂಬರೀಷ್, ಮಹೇಶ್‌ಗೌಡ ಮೊದಲಾದವರು ಉಪಸ್ಥಿತರಿದ್ದರು.

`ಸಂತಸ ತಂದಿದೆ'
ಬೆಂಗಳೂರು
: `ಕೇಂದ್ರ ಸಚಿವ ಸಂಪುಟವು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರನ್ನು ಇಡಲು ಅನುಮೋದನೆ ನೀಡಿರುವುದು ಸಂತಸ ತಂದಿದೆ. ಈ ಶುಭದಿನಕ್ಕಾಗಿ ಹಲವು ದಿನಗಳಿಂದ ಹೋರಾಟವನ್ನು ಮಾಡಿದ್ದೆವು' ಎಂದು ವಿಧಾನ ಪರಿಷತ್ ಸದಸ್ಯ ದೊಡ್ಡರಂಗೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT