ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಎಸ್ ಈಶ್ವರಪ್ಪಗೆ ನಿರೀಕ್ಷಣಾ ಜಾಮೀನು

ಪ್ರಚೋದನಾಕಾರಿ ಭಾಷಣ
Last Updated 24 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಶಿವಮೊಗ್ಗ: ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ. ಶಿವ ಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಎಸ್. ಈಶ್ವ ರಪ್ಪ ಅವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಏ. 9ರಂದು ಇಲ್ಲಿಯ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ವಿಪ್ರ ವೇದಿಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈಶ್ವರಪ್ಪ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದರು ಎಂದು ಆರೋಪಿಸಿ ಚುನಾವಣಾ ಅಧಿಕಾರಿ ಜನಾರ್ದನ್ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮೊಕದ್ದಮೆ ದಾಖಲಾದ ಕಾರಣ ಈಶ್ವರಪ್ಪ ನಿರೀಕ್ಷಣಾ ಜಾಮೀನು ಕೋರಿದ್ದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಆರ್.ಎಂ. ಶೆಟ್ಟರ್ ಅವರು 25 ಸಾವಿರ ರೂಪಾಯಿ ಬಾಂಡ್ ಸಲ್ಲಿಸುವಂತೆ ಸೂಚಿಸಿ ಈಶ್ವರಪ್ಪ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ ಎಂದು ಈಶ್ವರಪ್ಪ ಪರ ವಕೀಲ ಅಶೋಕ್ ಭಟ್ `ಪ್ರಜಾವಾಣಿ'ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT