ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ ಅಭ್ಯರ್ಥಿಗಳ ನಿರಶನ

Last Updated 6 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 2011ನೇ ಸಾಲಿಗೆ ನಡೆಸಿದ 362 ಗೆಜೆಟೆಡ್‌ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಾಮಾಣಿಕವಾಗಿ ಪರೀಕ್ಷೆ ಮತ್ತು ಸಂದರ್ಶನ ಎದುರಿಸಿದವರ ಪಟ್ಟಿ ಪ್ರಕಟಿಸಬೇಕು ಎಂದು ಒತ್ತಾಯಿಸಿ ಕೆಲವು ಅಭ್ಯರ್ಥಿಗಳು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ರಾಜ್ಯ ಸರ್ಕಾರ ಮರು ಮೌಲ್ಯಮಾಪನ ಮತ್ತು ಮರುಸಂದರ್ಶನಕ್ಕೆ ಆದೇಶ ಹೊರಡಿಸಿದೆ. ಸರ್ಕಾರದ ಈ ಆದೇಶದಿಂದ ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕ್ಯಾಪ್ಟನ್‌ ಸಂತೋಷ್‌ಕುಮಾರ್‌ ತಿಳಿಸಿದ್ದಾರೆ.

ಸಿಐಡಿ ಮಧ್ಯಂತರ ವರದಿ ಪ್ರಕಾರ ಅಕ್ರಮವೆಸಗಿರುವ ಅಭ್ಯರ್ಥಿ ಗಳನ್ನು ಆಯ್ಕೆ ಪ್ರಕ್ರಿಯೆಯಿಂದ ಹೊರಗಿಟ್ಟು ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕು.

ಮರುಮೌಲ್ಯಮಾಪನ ಮತ್ತು ಮರುಸಂದರ್ಶನ ನಡೆಸಿದರೆ ಅಕ್ರಮ ನಡೆಸಿದ್ದಾರೆ ಎನ್ನಲಾದ ಅಭ್ಯರ್ಥಿ
ಗಳಿಗೆ ಪುನಃ ಮತ್ತೊಮ್ಮೆ ಆಯ್ಕೆಯಾಗುವ ಅವಕಾಶ ನೀಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT