ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ: ಸಿಐಡಿ ವರದಿ ಬಹಿರಂಗಗೊಳಿಸಲು ಆಗ್ರಹ

Last Updated 11 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘2011 ರಲ್ಲಿ ಕೆಪಿಎಸ್‌ಸಿ ನೇಮಕಾತಿಯಲ್ಲಿ ನಡೆದ ಅಕ್ರಮ ಕುರಿತು ಸಿಐಡಿ ಅಧಿಕಾರಿಗಳು ಮೂರು ತಿಂಗಳ ಹಿಂದೆಯೇ ಸಲ್ಲಿಸಿರುವ ವರದಿಯನ್ನು ಸರ್ಕಾರ ಈ ಕೂಡಲೇ ಬಹಿರಂಗಪಡಿಸಬೇಕು’ ಎಂದು ಲೋಕ­ಸತ್ತಾ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯ ರವಿ ಕೃಷ್ಣಾರೆಡ್ಡಿ ಆಗ್ರಹಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರ ವರದಿಯನ್ನು ತಕ್ಷಣವೇ ಬಹಿರಂಗ­ಪಡಿಸಬೆಕು. ಇಲ್ಲವಾದರೆ, ಲೋಕ­ಸತ್ತಾ ಪಕ್ಷವು ವರದಿಯನ್ನು ಸಂಪೂರ್ಣ­ವಾಗಿ ಬಹಿರಂಗಪಡಿಸಲಿದೆ’ ಎಂದು ಎಚ್ಚರಿಕೆ ನೀಡಿದರು.

‘ಮುಂದಿನ ನೇಮಕಾತಿಗಳ ಬಗ್ಗೆ ದೀರ್ಘಕಾಲ ಪರಿಣಾಮ ಬೀರು­ವಂತಹ ಕ್ರಮಗಳನ್ನು ಕೈಗೊಳ್ಳುವ ಬದಲು ಸರ್ಕಾರ ದಿವ್ಯ ಮೌನ­ವಹಿಸಿದೆ. ಅಕ್ರಮ ಎಸಗಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಂಡು, ಅನ್ಯಾಯಕ್ಕೆ ಒಳಗಾಗಿರುವ ಅಭ್ಯರ್ಥಿ­ಗಳಿಗೆ ನ್ಯಾಯ ಒದಗಿಸಬೇಕು’ ಎಂದು ಅವರು ಒತ್ತಾಯಿಸಿದರು.
‘ಸರ್ಕಾರವು ಈ ಕೂಡಲೇ ಸಿಐಡಿ ವರದಿಯ ಆಧಾರದ ಮೇಲೆ, ತನ್ನ ಹಿಂದಿನ ನೇಮಕಾತಿ ಆದೇಶವನ್ನು ಹಿಂದಕ್ಕೆ ಪಡೆದು, 2011 ರ ನೇಮ­ಕಾತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈ ಬಿಡಬೇಕು. ಭ್ರಷ್ಟರ ಮೇಲೆ ಅತಿ ಶೀಘ್ರದಲ್ಲಿ ಕಾನೂನು ಕ್ರಮ ಕೈಗೊಳ್ಳ­ಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT