ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಬಿಎಲ್: ಇಂದು ಫ್ರಾಂಚೈಸಿಗಳ ಆಯ್ಕೆ

Last Updated 16 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಚೊಚ್ಚಲ ಕರ್ನಾಟಕ ಬ್ಯಾಡ್ಮಿಂಟನ್ ಲೀಗ್ (ಕೆಬಿಎಲ್) ನವೆಂಬರ್ 5ರಿಂದ ಆರಂಭವಾಗಲಿದ್ದು, ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆಯಲ್ಲಿ ಸೋಮವಾರ ಫ್ರಾಂಚೈಸಿಗಳ ಆಯ್ಕೆ ನಡೆಯಲಿದೆ.

`ಒಟ್ಟು 16 ಅರ್ಜಿಗಳು ಬಂದಿದ್ದು, ಅದರಲ್ಲಿ ಎಂಟು ಅರ್ಜಿಗಳನ್ನು ಆರಿಸಿಕೊಂಡು ಫ್ರಾಂಚೈಸಿಗಳ ಆಯ್ಕೆ ಮಾಡಲಾಗುವುದು~ ಎಂದು ಕೆಬಿಎಲ್  ಮುಖ್ಯಸ್ಥ ಥಾಮಸ್ ಕುನ್ನತ್ `ಪ್ರಜಾವಾಣಿ~ಗೆ ತಿಳಿಸಿದ್ದಾರೆ.

`ಬೇರೆ ಬೇರೆ ಜಿಲ್ಲೆಗಳಿಂದಲೂ ಅರ್ಜಿಗಳು ಬಂದಿವೆ. ಈ ಕುರಿತು ಪರಿಶೀಲನೆ ನಡೆಸಲಾಗುವುದು. ಫ್ರಾಂಚೈಸಿಗಳ ಆಯ್ಕೆ ಅಂತಿಮವಾದ ಮೇಲೆ ಸ್ಪಷ್ಟ ಚಿತ್ರಣ ಸಿಗಲಿದೆ. ಸೋಮವಾರ ರಾತ್ರಿ 7ರ ವರೆಗೂ ಬಿಡ್ ನಡೆಯಲಿದೆ. ಮೂರು ವರ್ಷದ ಅವಧಿಗೆ ಕನಿಷ್ಠ 2.5 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ~ ಎಂದು ಅವರು ಹೇಳಿದರು.

ಅಗ್ರ 90 ಆಟಗಾರರು ಕೆಬಿಎಲ್‌ನಲ್ಲಿ ಪಾಲ್ಗೊಳ್ಳಲು ಈಗಾಗಲೇ ಹೆಸರು ನೋಂದಾಯಿಸಿದ್ದಾರೆ. ಅಕ್ಟೋಬರ್ 24ರಂದು ಆಟಗಾರರ ಹರಾಜು ನಡೆಯಲಿದೆ. ರಾಷ್ಟ್ರೀಯ ಚಾಂಪಿಯನ್ ಅರವಿಂದ್ ಭಟ್, ಅನೂಪ್ ಶ್ರೀಧರ್, ನವದೆಹಲಿ ಕಾಮನ್‌ವೆಲ್ತ್ ಕ್ರೀಡಾಕೂಟದ ಡಬಲ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದ ಅಶ್ವಿನಿ ಪೊನ್ನಪ್ಪ, ಜಿ. ನಿಶ್ಚಿತಾ ಸೇರಿದಂತೆ ಇತರ ಪ್ರಮುಖ ಸ್ಪರ್ಧಿಗಳು ಈ ಲೀಗ್‌ನಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT