ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರ್ರಿ ಅಮೆರಿಕ ವಿದೇಶಾಂಗ ಕಾರ್ಯದರ್ಶಿ?

Last Updated 16 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ಅಮೆರಿಕ ಸೆನೆಟ್‌ನ ವಿದೇಶಾಂಗ ವ್ಯವಹಾರ ಸಮಿತಿ ಅಧ್ಯಕ್ಷರಾದ 69 ವರ್ಷದ ಜಾನ್ ಕೆರ್ರಿ ಅವರನ್ನು ಬಹು ಮಹತ್ವದ ವಿದೇಶಾಂಗ ಕಾರ್ಯದರ್ಶಿ ಹುದ್ದೆಗೆ ಅಧ್ಯಕ್ಷ ಬರಾಕ್ ಒಬಾಮ ನಾಮಕರಣ ಮಾಡುವ ಸಾಧ್ಯತೆಯಿದೆ.

ಈ ಹಿಂದೆ ಹಲವು ಬಾರಿ ಒಬಾಮ ಆಡಳಿತ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲ ಜಾನ್ ಕೆರ‌್ರಿ ಆಪದ್ಬಾಂಧವನ ರೀತಿ ನಡೆದುಕೊಂಡಿದ್ದಾರೆ. ಅವರು ಪಾಕಿಸ್ತಾನದ ಜತೆ ಅಮೆರಿಕ ಸಂಬಂಧ ಹದಗೆಟ್ಟಾಗಲೆಲ್ಲ ಆ ದೇಶಕ್ಕೆ ತೆರಳಿ ಸಂಬಂಧ ಸುಧಾರಣೆಗೆ ಒತ್ತು ನೀಡಿದ್ದಾರೆ.  ಮೆಸಾಚುಸೆಟ್ಸ್ ಸೆನೆಟ್ ಸದಸ್ಯರಾಗಿರುವ ಜಾನ್ ಕೆರ್ರಿ ಅವರ ಹೆಸರನ್ನು ವಿದೇಶಾಂಗ ಕಾರ್ಯದರ್ಶಿ ಹುದ್ದೆಗೆ ಮುಂದಿನ ವಾರ ಪ್ರಕಟಿಸುವ ಸಂಭವವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT