ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆವಿಎಲ್: ಜೀವ ವಿಮಾ ನಿಗಮ ತಂಡಕ್ಕೆ ಗೆಲುವು

Last Updated 22 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಬಲ ಪ್ರತಿರೋಧ ಎದುರಾದರೂ ಸಮರ್ಥ ಹೋರಾಟ ತೋರಿದ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ತಂಡ ಚೊಚ್ಚಲ ಕರ್ನಾಟಕ ವಾಲಿ ಲೀಗ್‌ನ ಐದನೇ ಹಾಗೂ ಅಂತಿಮ ಆವೃತ್ತಿಯ ಶನಿವಾರದ ಪಂದ್ಯದಲ್ಲಿ 25-19, 25-17, 25-23ರಲ್ಲಿ ಡಿವೈಎಸ್‌ಎಸ್ ತಂಡವನ್ನು ಮಣಿಸಿತು.

ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 60 ನಿಮಿಷಗಳ ಕಾಲ ಉಭಯ ತಂಡಗಳ ನಡುವೆ ಹೋರಾಟ ನಡೆಯಿತು. ವಿಜಯಿ ತಂಡದ ಪವನ್ ಹಾಗೂ ಅವಿನಾಶ್ ಉತ್ತಮ ಪ್ರದರ್ಶನ ತೋರಿದರು.

ಎಂಇಜಿ ಜಯಭೇರಿ: ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ತಂಡ 25-21, 25-22, 25-17ರಲ್ಲಿ ಎಎಸ್‌ಸಿ ವಿರುದ್ಧ ಜಯಭೇರಿ ಬಾರಿಸಿತು.

ಎಲ್‌ಐಸಿ ವಿರುದ್ಧ ಮೊದಲ ಪಂದ್ಯದಲ್ಲಿ ನಿರಾಸೆ ಅನುಭವಿಸಿದ್ದ ಎಂಇಜಿ ಈ ಪಂದ್ಯದಲ್ಲಿ ಗೆಲುವಿನ ನಗೆ ಬೀರಿತು. ಇದರ ಜೊತೆಗೆ ಮೂರು ಅಂಕಗಳನ್ನು ಪಡೆಯಿತು. ಎಎಸ್‌ಸಿ ಮೊದಲ ಪಂದ್ಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ತಂಡದ ವಿರುದ್ಧ ವಿಜಯ ಪಡೆದು ಪಾಯಿಂಟ್ ಪಟ್ಟಿಯಲ್ಲಿ ಖಾತೆ ತೆರೆದಿತ್ತು. ಶುಕ್ರವಾರ ರಾತ್ರಿ ನಡೆದ ಕೊನೆಯ ಪಂದ್ಯದಲ್ಲಿ ಎಎಸ್‌ಸಿ 25-23, 25-20, 25-22ರಲ್ಲಿ ಕೆಎಸ್‌ಪಿ ಎದುರು ಜಯ ಸಾಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT