ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಂಪುಟದಲ್ಲಿ ನಂಬರ್-2 ಯಾರು?

Last Updated 5 ಜುಲೈ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪ್ರಣವ್ ಮುಖರ್ಜಿ ಅವರಿಂದ ತೆರವಾದ ಕೇಂದ್ರ ಸಚಿವ ಸಂಪುಟದಲ್ಲಿ ಪ್ರಧಾನಿ ಮನಮೋಹನ್‌ಸಿಂಗ್ ನಂತರ ಎರಡನೇ ಸ್ಥಾನ ಶರದ್ ಪವಾರ್ ಅವರಿಗೆ ಒಲಿದಿದೆ. ಪ್ರಧಾನಮಂತ್ರಿಗಳ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಈ ಬಗ್ಗೆ ಗುರುವಾರ ಅಧಿಕೃತವಾಗಿ ಪ್ರಕಟಿಸಲಾಗಿದೆ.

ಈ ಮುಂಚೆ ಪಟ್ಟಿಯಲ್ಲಿ ಪ್ರಧಾನಿ ಬಳಿಕ ಪ್ರಣವ್ ಮುಖರ್ಜಿ ಅವರ  ಹೆಸರು ಎರಡನೇ ಸ್ಥಾನದಲ್ಲಿತ್ತು.
ಕಾಂಗ್ರೆಸ್ಸಿಗರಿಗೆ ಮಾತ್ರ ಮೀಸಲಿದ್ದ ಭದ್ರತೆ ಮೇಲಿನ ಸಂಪುಟ ಸಮಿತಿಯ ಪಟ್ಟಿಯಲ್ಲಿ ಎನ್‌ಸಿಪಿ ನಾಯಕರಾಗಿರುವ ಪವಾರ್ ಹೆಸರು ಮೊದಲ ಸ್ಥಾನದಲ್ಲಿದ್ದು, ಕಾಂಗ್ರೆಸ್ ಹಿರಿಯ ನಾಯಕರಾದ ಎ.ಕೆ. ಆಂಟನಿ, ಪಿ. ಚಿದಂಬರಂ ಮತ್ತು ಎಸ್. ಎಂ. ಕೃಷ್ಣ ನಂತರದ ಸ್ಥಾನದಲ್ಲಿದ್ದಾರೆ.

ಪ್ರಧಾನಿ ಮನಮೋಹನ್‌ಸಿಂಗ್ ಅವರು ಅಧಿಕೃತ ಪ್ರವಾಸದ ಮೇಲೆ ದೇಶದ ಹೊರಗೆ ಹೋದಾಗ ಸಚಿವರ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದ ಪ್ರಣವ್ ಅವರು ದೆಹಲಿಯಲ್ಲಿದ್ದು ಸರ್ಕಾರದ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT