ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ

Last Updated 22 ಜೂನ್ 2012, 19:30 IST
ಅಕ್ಷರ ಗಾತ್ರ

ಹಾಸನ: ಕೇಂದ್ರ ಸರ್ಕಾರದ ಆಡಳಿತ ವೈಖರಿ ಮತ್ತು ಪೆಟ್ರೋಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ಶುಕ್ರವಾರ ನಗರದ ಪ್ರಧಾನ ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

`ಯುಪಿಎ ಅಧಿಕಾರಕ್ಕೆ ಬಂದಾಗಿನಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದೆ. ಒಂದೆಡೆ ಕೃಷಿ ಉತ್ಪನ್ನಗಳ ಬೆಲೆ ಕುಸಿಯುತ್ತಿದ್ದರೆ, ಇನ್ನೊಂದೆಡೆ ಗೊಬ್ಬರದ ಸಬ್ಸಿಡಿ ಕಡಿತ ಮಾಡುವ ಮೂಲಕ ರೈತರ ಬೆನ್ನಿಗೆ ಇರಿಯುವಂಥ ಕೆಲಸವನ್ನು ಸರ್ಕಾರ ಮಾಡಿದೆ. ಇಂಥ ಜನವಿರೋಧಿ ಸರ್ಕಾರವನ್ನು ಕೂಡಲೇ ವಜಾ ಮಾಡಬೇಕು~ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಕಚೇರಿ ಒಳ ಪ್ರಾಂಗಣದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು. ನಂತರ ಕೆಲ ಪ್ರತಿಭಟನಾಕಾರರನ್ನು ಪೂಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣೇಗೌಡ, ನಗರಸಭೆ ಸದಸ್ಯ ಲೋಹಿತ್ ಕುಂದೂರ್, ಮಂಜುನಾಥ್ ಶರ್ಮಾ, ಪಟೇಲ್ ಮಂಜುನಾಥ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT