ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

Last Updated 13 ಅಕ್ಟೋಬರ್ 2012, 8:50 IST
ಅಕ್ಷರ ಗಾತ್ರ

ಹುಬ್ಬಳ್ಳಿ: `ಆಡಳಿತಕ್ಕೆ ಬರುವ ಮುನ್ನ ಕಾಂಗ್ರೆಸ್ ಕೆ ಹಾಥ್, ಗರೀಬಿ ಕೆ ಸಾಥ್ ಎನ್ನುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಆದರೆ ಈಗ ಕಾಂಗ್ರೆಸ್ ಕೆ ಹಾಥ್, ಕಾಲೆ ದಂಧೆವಾಲೋಂಕೆ ಸಾಥ್ ಎನ್ನುವ ಸ್ಥಿತಿಯಲ್ಲಿದೆ~ ಎಂದು ಸಂಸದ ಪ್ರಹ್ಲಾದ ಜೋಶಿ ಟೀಕಿಸಿದರು.

ಕುಟುಂಬವೊಂದಕ್ಕೆ ನೀಡಲಾಗುವ ಸಬ್ಸಿಡಿ ಸಿಲಿಂಡರ್ ಸಂಖ್ಯೆಯನ್ನು ಆರಕ್ಕೆ ಸೀಮಿತಗೊಳಿಸಿದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಮಹಾನಗರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಶುಕ್ರವಾರ ನಗರದಲ್ಲಿ ಏರ್ಪಡಿಸಿದ್ದ ಪ್ರತಿಭಟನಾ ರ‌್ಯಾಲಿಯಲ್ಲಿ ಅವರು ಮಾತನಾಡಿದರು.

`ಇದರಿಂದ ಸಾಮಾನ್ಯರಿಗೆ ಬದುಕಲು ಕಷ್ಟವಾಗುತ್ತದೆ. ಇದನ್ನು ವಿರೋಧಿಸಿ ಮಹಿಳೆಯರ ಮೂಲಕ ಪ್ರತಿಭಟನೆ ಕೈಗೊಳ್ಳಲಾಗಿದೆ~ ಎಂದು ಹೇಳಿದರು.

`ತರಕಾರಿ ಬೆಲೆ, ಧಾನ್ಯಗಳ ಬೆಲೆ ಹೆಚ್ಚಿದೆ. ಭ್ರಷ್ಟಾಚಾರದಿಂದಾಗಿ ಹಗರಣಗಳು ಹೆಚ್ಚುತ್ತಿವೆ. ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಕೂಡಾ ಭ್ರಷ್ಟಾಚಾರದಲ್ಲಿ ಸಿಲುಕಿದ್ದಾರೆ. ಮಧ್ಯವರ್ತಿಗಳಿಗೆ ಹಾಗೂ ಕಳ್ಳ ದಾಸ್ತಾನುದಾರರಿಗೆ ಬೆಂಬಲ ಕೊಟ್ಟ ಪರಿಣಾಮ ಬೆಲೆಗಳು ಹೆಚ್ಚುತ್ತಿವೆ. ಇದಕ್ಕಾಗಿ ಕಾಂಗ್ರೆಸ್ ದುರಾಡಳಿತ ಹಾಗೂ ಭ್ರಷ್ಟಾಚಾರವನ್ನು ಪ್ರತಿಭಟಿಸುತ್ತ ಅಧಿಕಾರದಿಂದ ಕೆಳಗಿಳಿಸುವವರೆಗೆ ಹೋರಾಡಬೇಕು~ ಎಂದು ಅವರು ಕರೆ ನೀಡಿದರು.

ಪ್ರತಿಭಟನೆಯಲ್ಲಿ ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಹೇಶ ಟೆಂಗಿನಕಾಯಿ, ಜಿಲ್ಲಾ ಮೋರ್ಚಾ ಅಧ್ಯಕ್ಷೆ ರಾಧಾಬಾಯಿ ಸಫಾರೆ, ಪ್ರಧಾನ ಕಾರ್ಯದರ್ಶಿ ಲೀಲಾ ಪಾಸ್ತೆ, ಉಪ ಮೇಯರ್ ಭಾರತಿ ಪಾಟೀಲ, ಪಾಲಿಕೆ ಸದಸ್ಯೆ ರಾಜಶ್ರೀ ಜಡಿ, ಸೆಂಟ್ರಲ್ ಕ್ಷೇತ್ರದ ಮೋರ್ಚಾ ಅಧ್ಯಕ್ಷೆ ಮೀನಾಕ್ಷಿ ವಂಟಮುರಿ, ನವಲಗುಂದ ತಾಲ್ಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಶಾಂತಾದೇವಿ ನಿಡವಣಿ, ಸುವರ್ಣಾ ಲೇಡೀಸ್ ಕ್ಲಬ್, ಮಧುರಾ ಎಸ್ಟೇಟ್ ಮಹಿಳಾ ಮಂಡಳ, ಕಾಮಾಕ್ಷಿ ಮಹಿಳಾ ಮಂಡಳ, ಸಿಬಿಟಿ ಹಾಸ್ಯ ಪರಿವಾರ, ಸುರಕ್ಷಾ ಮಹಿಳಾ ಮಂಡಳದ ಪದಾಧಿಕಾರಿಗಳು, ಭಾರತೀಯ ವೈದ್ಯಕೀಯ ಸಂಘದ ಧಾರವಾಡ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಂಗಳಾ ನಾಡಕರ್ಣಿ ಮೊದಲಾದವರು ಭಾಗವಹಿಸಿದ್ದರು.

ರ‌್ಯಾಲಿಯು ಮೂರುಸಾವಿರಮಠದಿಂದ ಆರಂಭಗೊಂಡು ತಹಶೀಲ್ದಾರ್ ಕಚೇರಿಯವರೆಗೆ ತೆರಳಿತು. ನಂತರ ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಧಾರವಾಡ ವರದಿ
ಸಿಲಿಂಡರ್ ಮಿತಿ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ `ಒಂದು ವರ್ಷಕ್ಕೆ ಪ್ರತಿ ಕುಟುಂಬಕ್ಕೆ 12 ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಬ್ಸಿಡಿ ದರದಲ್ಲಿ ಪೂರೈಸಬೇಕು ಎಂದು ಆಗ್ರಹಿಸಿದರು.  ಹಣದುಬ್ಬರ ಹೆಚ್ಚಳದಿಂದ ತರಕಾರಿ, ಬೇಳೆಕಾಳುಗಳ ಬೆಲೆ ಹೆಚ್ಚಳ  ಸೇರಿದಂತೆ ಎಲ್ಲ ರೀತಿಯಲ್ಲೂ ಕೇಂದ್ರದ ಸರ್ಕಾರಿ ನೀತಿಗಳು ಜನರನ್ನು ಶೋಸುತ್ತಿವೆ. ಪೆಟ್ರೋಲ್, ಡೀಸೆಲ್,ಅಡುಗೆ ಅನಿಲ ಬೆಲೆಗಳನ್ನು ಹೆಚ್ಚಿಸಿ ಬಡ ಮತ್ತು ಮಧ್ಯಮ ವರ್ಗದ ಜನತೆಯ ರಕ್ತ ಹೀರಲಾಗುತ್ತಿದೆ~ ಎಂದು ಆರೋಪಿಸಿದರು.

ಸಂಸದ ಪ್ರಹ್ಲಾದ ಜೋಶಿ, ಶಾಸಕರಾದ ಚಂದ್ರಕಾಂತ ಬೆಲ್ಲದ, ಸೀಮಾ ಮಸೂತಿ, ಮೋಹನ ಲಿಂಬಿಕಾಯಿ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಮಹೇಶ ಟೆಂಗಿನಕಾಯಿ, ಹು-ಡಾ ಮಾಜಿ ಅಧ್ಯಕ್ಷ ದತ್ತಾ ಡೋರ್ಲೆ, ಪಾಲಿಕೆ ಉಪಮೇಯರ್ ಭಾರತಿ ಪಾಟೀಲ, ನಿರ್ಮಲಾ ಜವಳಿ, ಪಾಲಿಕೆ ಮಾಜಿ ಮೇಯರ್ ಪೂರ್ಣ ಪಾಟೀಲ, ಸಂಜಯ ಕಪಟಕರ, ಗೀತಾ ನವಲಿ, ಶೋಭಾ ಸವದಿ, ರೂಪಾ ಪಾಲನಕರ, ಗಿರಿಜಮ್ಮ ಹಿರೇಮಠ, ಅಕ್ಕಮ್ಮ ಮಾನೆ, ಪುಷ್ಪಾ ನವಲಗುಂದ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT