ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಅನುದಾನ ದುರುಪಯೋಗ: ಆರೋಪ

Last Updated 20 ಫೆಬ್ರುವರಿ 2012, 7:50 IST
ಅಕ್ಷರ ಗಾತ್ರ

ಹಾನಗಲ್: ಕೇಂದ್ರದ ಯು.ಪಿ.ಎ ನೇತೃತ್ವದ ಸರ್ಕಾರ ಸಾವಿರಾರು ಕೋಟಿ ರೂಪಾಯಿ ಅನುದಾನ ನೀಡುತ್ತಿದ್ದರೂ ಅದು ರಾಜ್ಯದಲ್ಲಿ ಸದುಪಯೋಗವಾಗುತ್ತಿಲ್ಲ. ಬಡವರ ಅಲ್ಪಸಂಖ್ಯಾತರ ಹಿತ ಕಾಪಾಡುವಲ್ಲಿ ರಾಜ್ಯದ ಬಿಜೆಪಿ ಸರಕಾರ ವಿಫಲವಾಗಿದೆ ಎಂದು ಹಾವೇರಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಘಟಕದ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ ಆರೋಪಿಸಿದರು.

ಇಲ್ಲಿನ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಗಾರರು ಸಂಕಷ್ಟ ಎದುರಿಸುತ್ತಿದ್ದಾರೆ. ಭತ್ತ ಬೆಳೆದ ರೈತ ಸರಿಯಾದ ಬೆಲೆ ಸಿಗದೆ ಪರದಾಡುತ್ತಿದ್ದಾನೆ. ಕೃಷಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ, ಅಲ್ಲದೇ ರಾಜ್ಯದ ರೈತನಿಗೆ ಪೂರಕವಾಗುವಂತಹ ಯಾವುದೇ ವಾತಾವರಣ ಇಲ್ಲದಂತಾಗಿದೆ.

ಮುಂಬರುವ ದಿನಗಳಲ್ಲಿ ಕೃಷಿಗೆ ಹಿನ್ನಡೆಯಾಗಬಹುದು. ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ಎದುರಾಗಲಿದ್ದು, ಆಗ ಬಿಜೆಪಿ ಸರ್ಕಾರಕ್ಕೆ ರೈತರು ಸರಿಯಾದ ಪಾಠ ಕಲಿಸಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಗ್ರಾಮೀಣ ಪ್ರದೇಶಗಳಲ್ಲಿ ಬಿಜೆಪಿ ಸರ್ಕಾರದ ಜನವಿರೋಧಿ ದುರಾಡಳಿತವನ್ನು ತಿಳಿಸಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು. 

  ಹಾನಗಲ್ ಬ್ಲಾಕ್ ಕಾಂಗೆಸ್ ಅಧ್ಯಕ್ಷ ಸಿ.ಎಸ್.ಬಡಿಗೇರ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಒಂದಿಲ್ಲೊಂದು ಹಗರಣ ಭ್ರಷ್ಟಾಚಾರಗಳಲ್ಲಿ ತೊಡಗಿದೆ. ಈ ನಡುವೆ ಸದನದಲ್ಲಿ ನೀಲಿಚಿತ್ರ ವೀಕ್ಷಿಸಿದ ಸಚಿವರು ಸ್ಥಾನ ತ್ಯಜಿಸುವಂತಾಗಿರುವುದು ಬಿಜೆಪಿ ಸರಕಾರ ತಲೆ ತಗ್ಗಿಸುವ ಸಂಗತಿ. ಕಳಂಕರಹಿತ, ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದು ಈ ಸರ್ಕಾರದಿಂದ ಸಾಧ್ಯವಿಲ್ಲ ಎಂಬುದು ಅವರ ನಡವಳಿಕೆಯಿಂದ ಸ್ಪಷ್ಟವಾಗಿದೆ ಎಂದು ಟೀಕಿಸಿದರು.

ನೂತನ ಕಾಂಗ್ರೆಸ್ ಕಾರ್ಯದರ್ಶಿ ಕಾಶೀನಾಥ ನ್ಯಾಮತಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷದ ಸಂಘಟನೆಗೆ ಮುಂದಾಗಬೇಕು. ಇದಕ್ಕಾಗಿ ಪಕ್ಷದ ನಾಯಕರ ಸಲಹೆ ಸಹಕಾರ ಪಡೆದು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಮುಂದಾಗಬೇಕು ಎಂದರು.

ಸಭೆಯಲ್ಲಿ ತಾ.ಪಂ ಸದಸ್ಯ ಕಲವೀರಪ್ಪ ಪವಾಡಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಜಿ.ಎಸ್. ದೇಶಪಾಂಡೆ, ಯುವ ಕಾಂಗ್ರೆಸ್ ಅಧ್ಯಕ್ಷ ಮಖಬುಲ್‌ಅಹ್ಮದ ಹುಲಗೂರ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ನಜೀರಸಾಬ ಗಿರಸಿನಕೊಪ್ಪ, ಮುಖಂಡರಾದ ನಾಗೇಶ ಪಡೆಪ್ಪನವರ, ಬಸವಂತಪ್ಪ ತಹಶೀಲ್ದಾರ, ವಿರೇಶ ಬೈಲವಾಳ, ಬಸೀರಖಾನ ಪಠಾಣ,  ಪುಟ್ಟಪ್ಪ ಬಳಿಗಾರ, ರಾಮಣ್ಣ ಭಾವಿಮನಿ, ಶಬ್ಬೀರಸಾಬ ಶೇಖ, ತಿರುಕಪ್ಪ ದೊಡ್ಡಮನಿ, ಎಸ್.ಸಿ.ಕಮಡೊಳ್ಳಿ, ಚನಬಸಪ್ಪ ಸಿಗ್ಗಾವಿ, ಗುಡದಪ್ಪ ಮಾರನಬೀಡ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT