ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಕ್ರಮ ವಿರೋಧಿಸಿ ಪ್ರತಿಭಟನೆ

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಸದಸ್ಯರ ಧರಣಿ
Last Updated 21 ಡಿಸೆಂಬರ್ 2012, 9:43 IST
ಅಕ್ಷರ ಗಾತ್ರ

ಚಿತ್ರದುರ್ಗ: ಚಿಲ್ಲರೆ ವ್ಯಾಪಾರ ವ್ಯವಸ್ಥೆಯನ್ನು ಖಾಸಗೀಕರಣ ಗೊಳಿಸುವ ಹಾಗೂ ಬ್ಯಾಂಕಿಂಗ್ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಖಾಸಗಿ ವಲಯಕ್ಕೆ ಅನುಕೂಲ ಮಾಡಿ ದೇಶದ ಆರ್ಥಿಕ ಕ್ಷೇತ್ರಕ್ಕೆ ಧಕ್ಕೆ ತರಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸದಸ್ಯರು ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.ಕೇಂದ್ರ ಸರ್ಕಾರ ತರಾತುರಿಯಲ್ಲಿ ಬ್ಯಾಂಕಿಂಗ್ ಕಾಯ್ದೆ ತಿದ್ದುಪಡಿ ಮಾಡಲು ಮುಂದಾಗಿದ್ದು, ಕೂಡಲೇ ಈ ಕ್ರಮವನ್ನು ಸ್ಥಗಿತಗೊಳಿಸಬೇಕು.

ಬ್ಯಾಂಕ್‌ಗಳನ್ನು ವಿಲೀನಗೊಳಿಸುವುದನ್ನು ನಿಲ್ಲಿಸಬೇಕು. ಬಂಡವಾಳಶಾಹಿ ಬಹುರಾಷ್ಟ್ರೀಯ ಕಂಪೆನಿಗಳಿಗೆ ರಕ್ಷಣೆ ನೀಡುವುದನ್ನು ನಿಲ್ಲಿಸಬೇಕು. ಖಾಸಗಿ ಕಂಪನಿಗಳಿಗೆ ಹೊಸ ಪರವಾನಗಿ ನೀಡುವ ನಿರ್ಧಾರ ಕೂಡಲೇ ಹಿಂಪಡೆಯಬೇಕು. ಜತೆಗೆ, ದೇಶದ ಬ್ಯಾಂಕಿಂಗ್ ಕ್ಷೇತ್ರದ ರಕ್ಷಣೆಗೆ ಕೇಂದ್ರ ಸರ್ಕಾರ ಸದಾ ಸಿದ್ಧ ಇರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್‌ನ ರಾಜಪ್ಪ, ಐಎನ್‌ಜಿ ವೈಶ್ಯ ಬ್ಯಾಂಕಿನ ಗೀರೀಶ್, ಕಾರ್ಪೊರೇಷನ್ ಬ್ಯಾಂಕಿನ ವೀರೇಶ್, ಇಂಡಿಯನ್ ಬ್ಯಾಂಕಿನ ಪ್ರಶಾಂತ್, ಜೆಸಿಆರ್ ಬಡಾವಣೆಯ ಎಸ್‌ಬಿಎಂ ಬ್ಯಾಂಕಿನ ಸದಾಶಿವಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕೆನರಾ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರತು ಪಡಿಸಿ ಉಳಿದಂತೆ ಎಲ್ಲ ಬ್ಯಾಂಕಗಳನ್ನು ಮುಚ್ಚಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT