ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: 14 ಸಾವಿರ ಮಹಿಳೆಯರು, ಮಕ್ಕಳು ನಾಪತ್ತೆ

Last Updated 19 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಕಾಸರಗೋಡು: ಕೇರಳದಲ್ಲಿ ಕಳೆದ ಒಂದು ವರ್ಷದಲ್ಲಿ 14 ಸಾವಿರ ಮಹಿಳೆಯರು ಮತ್ತು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಕೇರಳ ಪೊಲೀಸ್ ಇಲಾಖೆ ಮತ್ತು ಯೂನಿಸೆಫ್ ಬಹಿರಂಗಪಡಿಸಿದೆ.
 
1,132 ಮಂದಿ ಅತ್ಯಾಚಾರಕ್ಕೊಳಗಾಗಿದ್ದಾರೆ. 221 ಮಂದಿ  ಅಪಹರಿಸಲಾಗಿದೆ. 15 ಮಂದಿ ಮಹಿಳೆಯರು ವರದಕ್ಷಿಣೆ ಹಿಂಸೆ ಸಹಿಸಲಾರದೆ ಸಾವಿಗೀಡಾಗಿದ್ದಾರೆ. 573 ಮಂದಿ ಲೈಂಗಿಕ ಕಿರುಕುಳಕ್ಕೊಳಗಾಗಿದ್ದಾರೆ. ಮಹಿಳೆಯರಿಗೆ ಕಿರುಕುಳ ಬಗ್ಗೆ 3,756 ಮತ್ತು ಪತಿ ಮನೆಯಲ್ಲಿ ಕಿರುಕುಳ ಅನುಭವಿಸಿದ ಬಗ್ಗೆ 5,377 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT