ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಗಾರಿಕಾ ಕ್ಷೇತ್ರದಲ್ಲಿ ಹಿನ್ನಡೆ

Last Updated 5 ಅಕ್ಟೋಬರ್ 2012, 19:15 IST
ಅಕ್ಷರ ಗಾತ್ರ

ಬೆಂಗಳೂರು: `ರಾಜ್ಯವು ದಕ್ಷತೆ ಹಾಗೂ ಕೌಶಲದಲ್ಲಿ ಮುಂಚೂಣಿಯಲ್ಲಿದೆ. ಆದರೆ, ಕೈಗಾರಿಕಾ ಕ್ಷೇತ್ರದ ಸಾಧನೆಯಲ್ಲಿ ಹಿಂದುಳಿದಿದೆ~ ಎಂದು ಆರ್ಟ್ ಆಫ್ ಲಿವಿಂಗ್‌ನ ಸಂಸ್ಥಾಪಕ ಶ್ರೀಶ್ರೀ ರವಿಶಂಕರ್ ಗುರೂಜಿ ಬೇಸರ ವ್ಯಕ್ತಪಡಿಸಿದರು.

ಎಫ್‌ಕೆಸಿಸಿಐ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ನಗರದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.  

`ಆಡಳಿತ ನಡೆಸುವವರು ಹೊಸ ಕಾನೂನು, ನೀತಿಗಳನ್ನು ಜಾರಿಗೆ ತಂದಾಗ ಈ ನೀತಿ ಸರಿಯಿಲ್ಲ ಎಂದು ಮನಸ್ಸಿನಲ್ಲಿಯೇ ಕೊರಗುತ್ತೇವೆ. ಇದರ ಬದಲು ಹಿರಿಯ ನಾಗರಿಕರ ಸಲಹಾ ಸಮಿತಿಯೊಂದನ್ನು ರಚಿಸಿಕೊಂಡು ಆಡಳಿತ ನಡೆಸುವವರಿಗೆ ಕಾಲ ಕಾಲಕ್ಕೆ ಸಲಹೆ ನೀಡಬೇಕು. ಆಗ ದೇಶ ಪ್ರಗತಿಶೀಲವಾಗುತ್ತದೆ~ ಎಂದು ಅಭಿಪ್ರಾಯಪಟ್ಟರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT