ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಗಾರಿಕಾ ಸಂಘಗಳ ಸಮಾಲೋಚನಾ ಸಭೆ

Last Updated 23 ಸೆಪ್ಟೆಂಬರ್ 2011, 10:15 IST
ಅಕ್ಷರ ಗಾತ್ರ

ಮೈಸೂರು: ಇಂದಿನ ಕೈಗಾರಿಕಾ ಕ್ಷೇತ್ರದ ಪರಿಸ್ಥಿತಿಯನ್ನು ವಿಶ್ಲೇಷಿಸಿ ಎಲ್ಲಾ ಸಂಘಟನೆಗಳು ಒಟ್ಟುಗೂಡಿ ಕೆಲಸ ಮಾಡುವುದರಿಂದ ಹಲವು ಪ್ರಯೋಜನ ಪಡೆಯಬಹುದು ಎಂದು ಕಾಸಿಯಾ ಅಧ್ಯಕ್ಷ ಪ್ರಕಾಶ್ ಎನ್.ರಾಯ್ಕರ್ ಹೇಳಿದರು.

ಮೈಸೂರು ಕೈಗಾರಿಕೆಗಳ ಸಂಘದ ವತಿಯಿಂದ ಈಚೆಗೆ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಸಂಘದ ಅಧ್ಯಕ್ಷ ಪಿ.ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ರಾಮಣ್ಣವರ ಮಾತನಾಡಿ ಮುಂಬರುವ ನವೆಂಬರ್‌ನಲ್ಲಿ ರಾಷ್ಟ್ರಮಟ್ಟದ ವೆಂಡರ್ ಡೆವಲಪ್‌ಮೆಂಟ್ ಕಾರ್ಯಕ್ರಮದಲ್ಲಿ ಎಲ್ಲಾ ಸಂಘದವರು ಸಹಕರಿಸಿದ್ದಲ್ಲಿ ಬಹುದಿನಗಳ ಬೇಡಿಕೆಯಾದ ಕೈಗಾರಿಕಾ ಅದಾಲತ್ ಕೂಡ ನಡೆಯಲಿದೆ ಎಂದರು.

ಎಂವೈಎಸ್‌ಎಸ್‌ಐಎಂಎ ಅಧ್ಯಕ್ಷ ಶ್ರೀಧರ ಪ್ರಸ್ತಾವನೆ ಮಂಡಿಸಿದರು. ಎಚ್‌ಐಇಎಂಎ ಅಧ್ಯಕ್ಷ ಜಯಂತ್, ವೀವರ್ಸ್‌ ಅಸೋಸಿಯೇಷನ್ ಅಧ್ಯಕ್ಷ ಅಶ್ವತ್ಥನಾರಾಯಣ್, ಕಾಸಿಯಾದ ಮಾಜಿ ಅಧ್ಯಕ್ಷ ಅರವಿಂದ ಬುರ್ಜಿ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಶ್ರೀನಿವಾಸ್, ಕೌನ್ಸಿಲ್ ಸದಸ್ಯರಾದ ಶಶಿಧರ್, ಸುರೇಶ್‌ಕುಮಾರ್ ಜೈನ್, ವಿವಿಧ ಸಂಘಗಳ ಗೋಪಾಲ್, ರಾಜಶೇಖರ್, ಪುರುಷೋತ್ತಮ್ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT