ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈದಿಗಳ ಸಾವು: ತನಿಖೆಗೆ ಆದೇಶ

Last Updated 16 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ತೆಗುಸಿಗಲ್ಪ (ಐಎಎನ್‌ಎಸ್): ಹೊಂಡು ರಾಸ್‌ನ ಕೊಮಯಾಗುವಾ ಕಾರಾಗೃಹದಲ್ಲಿ ಸಂಭವಿಸಿದ ಅಗ್ನಿ ದುರಂತದ ಬಗ್ಗೆ ಪಾರದರ್ಶಕ ತನಿಖೆ ನಡೆಸಲಾಗುವುದು ಎಂದು ಅಧ್ಯಕ್ಷ ಪೊರ್ಫಿರಿಯೊ ಲೊಬೋ ತಿಳಿಸಿದ್ದಾರೆ.

`ಯಾವ ಕಾರಣದಿಂದ ಈ ದುರಂತ ಸಂಭವಿಸಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ಘಟನೆಗೆ ಕಾರಣರಾರು ಎಂಬುದನ್ನು ಪತ್ತೆ ಹಚ್ಚಲಾಗುವುದು~ ಎಂದು ಟಿವಿ ಮತ್ತು ಆಕಾಶವಾಣಿ ಮೂಲಕ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಲೊಬೋ ಬುಧವಾರ ಹೇಳಿದ್ದಾರೆ.

ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಜೈಲು ಉಸ್ತುವಾರಿ ಹೊಂದಿರುವ ಭದ್ರತಾ ಕಾರ್ಯದರ್ಶಿ ಬೊನಿಲ್ಲಾ ಅವರಿಗೆ ಸೂಚಿಸಲಾಗಿದೆ ಎಂದು ಅಧ್ಯಕ್ಷರು ಹೇಳಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಜೈಲಿನ ವ್ಯವಸ್ಥೆ ನೋಡಿಕೊಳ್ಳುತ್ತಿರುವ ಅಧಿಕಾರಿಗಳನ್ನೂ ಅಮಾನತು ಮಾಡಲಾಗುವುದು. ಒಟ್ಟಾರೆ ತನಿಖೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೊಂಡುರಾಸ್‌ಗೆ ಈ ದಿನ ಭಾರಿ ದುಃಖದ ದಿನ, ಇದಕ್ಕೆ ನಾವು ತೀವ್ರ ಶೋಕ ವ್ಯಕ್ತಪಡಿಸುತ್ತೇವೆ, ಜೈಲಿನಲ್ಲಿದ್ದ ತಮ್ಮ ಸಂಬಂಧಿಕರನ್ನು ಕಳೆದುಕೊಂಡು ದುಃಖಿತರಾದವರಿಗೆ ನನ್ನ ಸಂಪೂರ್ಣ ಸಹಾನುಭೂತಿ ಇದೆ ಎಂದು ನುಡಿದರು.

ದುರಂತಕ್ಕೆ ನಿಖರ ಕಾರಣ ಗೊತ್ತಾಗಿಲ್ಲ. ಆದರೆ ಶಾರ್ಟ್ ಸರ್ಕಿಟ್‌ನಿಂದ ಸಂಭವಿಸಿರಬಹುದು ಎಂದು ಭದ್ರತಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಈ ಅಗ್ನಿ ಆಕಸ್ಮಿಕದಲ್ಲಿ 350 ಕ್ಕೂ ಹೆಚ್ಚು ಕೈದಿಗಳು ಮೃತಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ತಿಳಿಸಿದೆ.

 ಒಟ್ಟು 357 ಜನರು ಮೃತಪಟ್ಟಿದ್ದಾರೆ ಎಂದು  ವಕ್ತಾರರು ಹೇಳಿದ್ದಾರೆ. ಆದರೆ 272 ಕೈದಿಗಳು ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಭದ್ರತಾ ಕಾರ್ಯದರ್ಶಿ ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT