ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಂಕಣಿ ಪ್ರತಿಭೆಗಳಿಗೆ `ಕ್ಷಮತಾ' ಶಿಬಿರ

Last Updated 2 ಜುಲೈ 2013, 5:56 IST
ಅಕ್ಷರ ಗಾತ್ರ

ಮಂಗಳೂರು: ವಿಶ್ವ ಕೊಂಕಣಿ ಕೇಂದ್ರದ ವಿದ್ಯಾರ್ಥಿ ವೇತನ ನಿಧಿಯ ವತಿಯಿಂದ ವಿದ್ಯಾರ್ಥಿವೇತನ ಪಡೆದ ಎಂಜಿನಿಯರಿಂಗ್ ಮತ್ತು ಎಂಬಿಬಿಎಸ್ ಅಧ್ಯಯನ ಮಾಡುವ ಒಟ್ಟು 455 ಕೊಂಕಣಿ ಮಾತೃಭಾಷೆ ವಿದ್ಯಾರ್ಥಿಗಳಿಗೆ  ಕ್ಷಮತಾ (ಕೊಂಕಣಿ ವಿದ್ಯಾರ್ಥಿಗಳ ಉನ್ನತ ಸಾಧನೆ ಪ್ರೇರಣೆ ಮತ್ತು ತರಬೇತಿ ಅಕಾಡೆಮಿ) ಶಿಬಿರಗಳ ಸರಣಿಯನ್ನು ಸೋಮವಾರ ಆರಂಭಿಸಲಾಯಿತು.

ಉದ್ಯಮಿ ವಾಲ್ಟರ್ ಡಿಸೋಜ ಅವರು ಶಿಬಿರ ಉದ್ಘಾಟಿಸಿದರು. ಶಿಬಿರಾರ್ಥಿಗಳು ತಮ್ಮ ಜೀವನದಲ್ಲಿ ವ್ಯಕ್ತಿ ವಿಕಸನಕ್ಕೆ ಅನುಕೂಲವಾಗುವಂತ ಇಂತಹ ಶಿಬಿರಗಳ ಚಟುವಟಿಕೆಗಳಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಬೇಕು ಎಂದು ಸಲಹೆ ನೀಡಿದರು.

ವಿಶ್ವ ಕೊಂಕಣಿ ಕೇಂದ್ರದ ಸ್ಥಾಪಕಾಧ್ಯಕ್ಷ ಬಸ್ತಿ ವಾಮನ ಶೆಣೈ ಅಧ್ಯಕ್ಷತೆ ವಹಿಸಿದ್ದರು. ವೀರ ವೆಂಕಟೇಶ ಚಾರಿಟೆಬಲ್ ಟ್ರಸ್ಟ್‌ನ ಕಾರ್ಯದರ್ಶಿ ಗಣಪತಿ ಪೈ, ಕ್ಷಮತಾ  ಶಿಬಿರದ ಸಂಚಾಲಕ ಗಿರಿಧರ ಕಾಮತ್, ಸಿಂಡಿಕೇಟ ಬ್ಯಾಂಕಿನ ನಿವೃತ್ತ ಅಧಿಕಾರಿ ಸುರೇಶ ಶೆಣೈ, ವಿಶ್ವ ಕೊಂಕಣಿ ಕೇಂದ್ರ ಭಾಷಾ ಸಂಸ್ಥಾನದ ಸಹಾಯಕ ನಿರ್ದೇಶಕ ಗುರುದತ್ತ ಬಂಟ್ವಾಳಕಾರ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT