ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಠಡಿ ನಿರ್ಮಾಣ ವಿಳಂಬ: ಮಕ್ಕಳಿಗೆ ಬಯಲಲ್ಲೇ ಪಾಠ

Last Updated 12 ಮೇ 2012, 19:30 IST
ಅಕ್ಷರ ಗಾತ್ರ

ಯಲಹಂಕ: ಉಪನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿ ವಿಳಂಬಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಆಟದ ಮೈದಾನದಲ್ಲಿ ಕುಳಿತು ಪಾಠ ಕೇಳಬೇಕಾದ ಸ್ಥಿತಿ ನಿರ್ಮಾ ಣವಾಗಿದೆ.

ಪ್ರಾಥಮಿಕ ಶಾಲೆಯಲ್ಲಿ 530 ವಿದ್ಯಾರ್ಥಿಗಳು ಹಾಗೂ ಪ್ರೌಢಶಾಲೆಯಲ್ಲಿ 203 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 2007-08ರಲ್ಲಿ ಪ್ರಾಥಮಿಕ ಶಾಲೆಯ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿ ಆರಂಭವಾಗಿ ಅರ್ಧಕ್ಕೆ ಸ್ಥಗಿತಗೊಂಡಿದೆ. 2011ರ ಮೇ ತಿಂಗಳಲ್ಲಿ ರೂ 58 ಲಕ್ಷ ವೆಚ್ಚದಲ್ಲಿ ಪ್ರೌಢಶಾಲೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಶಂಕುಸ್ಥಾಪನೆ ನೆರವೇರಿಸಿದ್ದರು. ಆದರೆ ಈ ವರೆಗೂ ಕಾಮಗಾರಿ ಆರಂಭವಾಗದ ಹಿನ್ನೆಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಾಥಮಿಕ ಶಾಲಾ ಕೊಠಡಿಗಳಲ್ಲೇ ಪಾಠ ಕೇಳಬೇಕಾಗಿದೆ.

`ಪ್ರಾಥಮಿಕ ಶಾಲೆಯ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ನಿರ್ಮಿಸಲು ಉದ್ದೇಶಿಸಿರುವ ಕೊಠಡಿಗಳ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಹಳೆಯ ಕೊಠಡಿಗಳಲ್ಲೇ  ಪ್ರೌಢಶಾಲಾ ತರಗತಿಗಳನ್ನು ನಡೆಸಿಕೊಂಡು ಹೋಗಲಾಗುತ್ತಿದೆ. ಇದರಿಂದಾಗಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತೊಂದರೆ ಅನುಭವಿಸಬೇಕಾಗಿದೆ~ ಎಂಬುದು ಸ್ಥಳೀಯರ ಆರೋಪ.

ಸರ್ವಶಿಕ್ಷಣ ಅಭಿಯಾನ ಯೋಜನೆಯಡಿಯಲ್ಲಿ ಹಂತ ಹಂತವಾಗಿ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬಗೊಂಡಿದೆ ಎಂಬುದು ಗುತ್ತಿಗೆದಾರರ ಹೇಳಿಕೆ. `ಈ ಹಿಂದೆ ಕೊಠಡಿಗಳ ನಿರ್ಮಾಣಕ್ಕೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ಪಡೆದು ತಿಳಿಸುತ್ತೇನೆ ಎಂಬುದಾಗಿ ಪ್ರಾಥಮಿಕ ಶಿಕ್ಷಣ ಇಲಾಖೆಯ ಆಯುಕ್ತ  ತುಷಾರ್ ಗಿರಿನಾಥ್ ಹಾರಿಕೆಯ ಉತ್ತರ ನೀಡಿದ್ದಾರೆ.

ಶಿಕ್ಷಣ ಮೂಲ ಸೌಕರ್ಯ ಒದಗಿಸಲು ವಿಳಂಬ ನೀತಿ ಅನುಸರಿಸುತ್ತಿದೆ~ ಎಂದು ಶಾಲೆಯ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಕಾಕೋಳು ಲಕ್ಕಪ್ಪ ಆರೋಪಿಸಿದರು.

`ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿ ನೂತನ ಪ್ರೌಢಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುದಾನ ನೀಡಲು ಅನುಮತಿ ದೊರೆತಿದ್ದು, ಅನುದಾನ ಬಿಡುಗಡೆಯಾದ ಕೂಡಲೇ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು~ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ಉತ್ತರ ವಲಯದ ಉಪನಿರ್ದೇಶಕ ಟಿ.ಸಿ.ಚಂದ್ರಯ್ಯ `ಪ್ರಜಾವಾಣಿ~ಗೆ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT