ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಕೊಳಗೇರಿ ವಾಸಿಗಳಿಗೆ ಹಂತಹಂತವಾಗಿ ಹಕ್ಕುಪತ್ರ'

Last Updated 6 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಮಹದೇವಪುರ: `ಕ್ಷೇತ್ರದಲ್ಲಿ ಕೊಳಚೆ ಅಭಿವೃದ್ಧಿ ಮಂಡಳಿ ವತಿಯಿಂದ ಹೊಸದಾಗಿ ಗುರುತಿಸಿರುವ ನಲವತ್ತು ಕೊಳಚೆ ಪ್ರದೇಶಗಳಲ್ಲಿ ವಾಸವಾಗಿರುವ ಬಡವರಿಗೆ ಹಂತ ಹಂತವಾಗಿ ಹಕ್ಕುಪತ್ರಗಳನ್ನು ನೀಡಲಾಗುವುದು' ಎಂದು ಸಚಿವ ಅರವಿಂದ ಲಿಂಬಾವಳಿ ಭರವಸೆ ನೀಡಿದರು.

ಇಲ್ಲಿನ ಬೆಳ್ಳಂಡೂರು ವಾರ್ಡ್ ವ್ಯಾಪ್ತಿಯ ದೇವರಬಿಸನಹಳ್ಳಿ ಗ್ರಾಮದಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.ದೇವರಬಿಸನಹಳ್ಳಿ ಗ್ರಾಮದಲ್ಲಿ 1,800 ಮನೆಗಳಿಗೆ ಹಕ್ಕುಪತ್ರಗಳನ್ನು ನೀಡಲಾಗುವುದು. ಮೊದಲ ಹಂತದಲ್ಲಿ 230 ಹಕ್ಕುಪತ್ರಗಳನ್ನು ವಿತರಿಸಲಾಗುತ್ತಿದೆ. ಕ್ಷೇತ್ರದ 40 ಕೊಳಚೆ ಪ್ರದೇಶಗಳ ಪೈಕಿ 13 ಕೊಳಚೆ ಗ್ರಾಮದಲ್ಲಿನ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಮೊದಲ ಹಂತದಲ್ಲಿ ಇನ್ನೂರಕ್ಕೂ ಹೆಚ್ಚು ಹಕ್ಕುಪತ್ರಗಳನ್ನು ನೀಡಲಾಗಿದೆ' ಎಂದರು. 

ಅಧ್ಯಕ್ಷತೆ ವಹಿಸಿದ್ದ ಮಹದೇವಪುರ ಕ್ಷೇತ್ರದ ಬಿಜೆಪಿ ಘಟಕದ ಅಧ್ಯಕ್ಷ ಪಿ.ಕೆ.ಜಯಚಂದ್ರ ರೆಡ್ಡಿ, `ಕೊಳಚೆ ಅಭಿವೃದ್ಧಿ ಮಂಡಳಿಯು ಎರಡು ತಿಂಗಳಲ್ಲಿ ದೇವರಬಿಸನಹಳ್ಳಿ ಗ್ರಾಮದಲ್ಲಿ ಮನೆಗಳ ಸಮೀಕ್ಷೆ ಮಾಡಿದ್ದು, ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT