ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳಚೆ ಪ್ರದೇಶಗಳಿಗೆ ಹಕ್ಕುಪತ್ರ ನೀಡಲು ಆಗ್ರಹ

Last Updated 24 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ಸರ್ವೇ ಆಗಿರುವ ಜಿಲ್ಲೆಯ 48 ಕೊಳಚೆ ಪ್ರದೇಶಗಳಿಗೆ ಹಕ್ಕುಪತ್ರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಕೊಳೆಗೇರಿ ನಿವಾಸಿಗಳ ಸಂಘಟನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಕೊಳಚೆ ಪ್ರದೇಶದಲ್ಲಿ ಅನೇಕ ವರ್ಷಗಳಿಂದ ವಾಸಿಸುತ್ತಿರುವ ಬಡಕಾರ್ಮಿಕರು, ಕೂಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಮತ್ತು ಹಿಂದುಳಿದವರಿಗೆ ಸರ್ಕಾರ ಇಲ್ಲಿಯವರೆಗೆ ಹಕ್ಕುಪತ್ರ ನೀಡಿಲ್ಲ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಎಲ್ಲಾ ಸ್ಲಂಗಳನ್ನು ಕೊಳಚೆ ಪ್ರದೇಶ ಎಂದು ಘೋಷಿಸಿರುವ ಮತ್ತು ಸರ್ವೇ ಮಾಡಿರುವ ಎಲ್ಲಾ ಪ್ರದೇಶಗಳಿಗೆ ಹಕ್ಕುಪತ್ರ ನೀಡಬೇಕು. ಪರಿಚಯ ಪತ್ರ ನೀಡಬಾರದು ಎಂದು ಆಗ್ರಹಿಸಿದರು.

ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಇಲ್ಲಿಯ ತನಕ ಆಶ್ರಯ ಸಮಿತಿ, ಆಶ್ರಯ ಯೋಜನೆಯಡಿ ಸೂರು ಇಲ್ಲದವರಿಗೆ ಯಾವುದೇ ನಿವೇಶನ ಹಂಚಿಕೆ ಮಾಡಿಲ್ಲ ಎಂದು ಆರೋಪಿಸಿದರು.
ಸಂಘಟನೆಯ ಪದಾಧಿಕಾರಿಗಳಾದ ನಿಂಬೆಹಣ್ಣು ಮಂಜುನಾಥ್, ಶ್ರೀನಿವಾಸ್, ಮಂಜಪ್ಪ, ಭೀಮಪ್ಪ, ರಘು, ಸತೀಶ್ ಮತ್ತಿತರರು ಧರಣಿಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT