ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋರ್ಟ್ ಹೊರಗೆ ವ್ಯಾಜ್ಯ ಇತ್ಯರ್ಥಕ್ಕೆ ಆದ್ಯತೆ

Last Updated 7 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಕಳಸ: `ಕ್ಷುಲ್ಲಕ ಎನಿಸುವ ವಿಷಯಗಳಿಗೂ ನ್ಯಾಯಾಲಯದ ಮೊರೆ ಹೋಗುವುದು ತಪ್ಪಬೇಕು. ಸಣ್ಣಪುಟ್ಟ ಪ್ರಕರಣಗಳನ್ನು ನ್ಯಾಯಾಲಯದ ಹೊರಗೆ ಬಗೆಹರಿಸಿಕೊಳ್ಳುವುದು ಉತ್ತಮ~ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಪದ್ಮ ಪ್ರಸಾದ್ ಅಭಿಪ್ರಾಯಪಟ್ಟರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ರೋಟರಿ ಕ್ಲಬ್ ಮತ್ತಿತರ ಸಂಸ್ಥೆಗಳ ಸಹಯೋಗದಲ್ಲಿ ಪಟ್ಟಣದ ರೋಟರಿ ಬಾಲಭವನದಲ್ಲಿ ಭಾನುವಾರ ನಡೆದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿವಾದಗಳ ಇತ್ಯರ್ಥದಲ್ಲಿ ಮಧ್ಯಸ್ಥಿಕೆಯ ಪಾತ್ರ ವಿಚಾರದಲ್ಲಿ ವಕೀಲ ವಸಂತೇಗೌಡ ಉಪನ್ಯಾಸ ನೀಡಿ ಮೊಕದ್ದಮೆಗಳನ್ನು ಮಧ್ಯಸ್ಥಿಕೆಯ ಮೂಲಕ ಪರಿಹರಿಸಿಕೊಳ್ಳುವುದರಿಂದ ಜನರಿಗೆ ಹಣ, ಸಮಯ, ಶ್ರಮದ ಉಳಿತಾಯ ಆಗುತ್ತದೆ ಎಂದರು.

ಮಹಿಳೆ ಮತ್ತು ಕಾನೂನು ಬಗ್ಗೆ ಮಾತನಾಡಿದ ವಕೀಲ ವೆಂಕಟೇಶ್, ಮಾತನಾಡಿದರು. ತಾ.ಪಂ. ಅಧ್ಯಕ್ಷ ಹಿತ್ಲುಮಕ್ಕಿ ರಾಜೇಂದ್ರ, ಗ್ರಾ.ಪಂ. ಅಧ್ಯಕ್ಷ ಸಂತೋಷ್, ರೋಟರಿ ಅಧ್ಯಕ್ಷ ಸುಗಮ್, ವಕೀಲರ ಸಂಘದ ಅಧ್ಯಕ್ಷ ದರ್ಶನ್ ವಕೀಲರಾದ ಪ್ರಶಾಂತ್, ವಿಶಾಲ, ಜಯರಾಂ, ಅಶೋಕ್, ಜಗದೀಶ್, ಪ್ರಸನ್ನಕುಮಾರ್, ಜಯರಾಜ್, ಗೋಪಾಲಗೌಡ ಅಗತ್ಯ ಮಾಹಿತಿ ನೀಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT