ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಕೋರ್ಟ್‌ನಲ್ಲಿ ಉತ್ತರಿಸುತ್ತೇನೆ'

Last Updated 13 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಶಿವಮೊಗ್ಗ: `ನನ್ನ ಮೇಲಿನ ದೂರು ದುರುದ್ದೇಶಪೂರಿತ. ಕೇಂದ್ರ ಚುನಾವಣಾ ಆಯೋಗದ ನೋಟಿಸ್‌ಗೆ ನ್ಯಾಯಾಲಯದಲ್ಲಿ ಸಮರ್ಥವಾಗಿ ಉತ್ತರಿಸಲು ನಾನು ಸಿದ್ಧ' ಎಂದು ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದರು.

`ಏ. 9ರಂದು ನಗರದ ಖಾಸಗಿ ಕಾರ್ಯಕ್ರಮದಲ್ಲಿ ಸಮಾಜದ ಜಾಗೃತಿ ಹಿನ್ನೆಲೆಯಲ್ಲಿ ಆಡಿದ ಮಾತನ್ನು ದೂರುದಾರರು ತಿರುಚಿದ್ದಾರೆ. ಚುನಾವಣಾ ಅಧಿಸೂಚನೆ 10ರಂದು ಪ್ರಕಟವಾಗಿದೆ. ಇದರಲ್ಲಿ ಯಾವುದೇ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ. ಈ ಹಿಂದೆ ಇಂತಹ ಪ್ರಕರಣಗಳಲ್ಲಿ ಹೈಕೋರ್ಟ್ ನೀಡಿದ ತೀರ್ಪಿನ ಆದೇಶಗಳು ನನ್ನ ಬಳಿ ಇವೆ. ಅವುಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸುವೆ' ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಸಮರ್ಥಿಸಿಕೊಂಡರು.`ನನ್ನ ವಿರುದ್ಧ ದೂರು ದಾಖಲಾಗಿರುವುದಕ್ಕೆ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು. ಈ ಪ್ರಕರಣದಲ್ಲಿ ಜಯ ನನ್ನದೇ' ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

`ಚುನಾವಣಾ ಆಯೋಗವೇ ನಿಮ್ಮ ವಿರುದ್ಧ ದೂರು ದಾಖಲಿಸಿದೆಯಲ್ಲಾ' ಎಂಬ ಸುದ್ದಿಗಾರರ ಪ್ರಶ್ನೆಗೆ, `ಎಲ್ಲಿ ಉತ್ತರ ಕೊಡಬೇಕು ಅಲ್ಲಿಯೇ ಉತ್ತರ ಕೊಡುತ್ತೇನೆ. ಈ ಬಗ್ಗೆ ನಿಮ್ಮ ಬಳಿ ಚರ್ಚಿಸುವುದಿಲ್ಲ' ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT