ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರಕ್ಕೆ 120 ಕೈಗಾರಿಕೆ ಆಗಮನ

Last Updated 19 ಅಕ್ಟೋಬರ್ 2012, 7:40 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ನರಸಾಪುರ ಕೈಗಾರಿಕಾ ವಲಯದಲ್ಲಿ  ನಾಲ್ಕು ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಿಂದ 120 ಕೈಗಾರಿಕೆಗಳು ಬರಲಿವೆ ಎಂದು ಜಿಲ್ಲಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್ ಇಲ್ಲಿ ತಿಳಿಸಿದರು.
ಕೈಗಾರಿಕಾ ಕೇಂದ್ರದ ಸಭಾಂಗಣದಲ್ಲಿ ಗುರುವಾರ ನಡೆದ ಕೈಗಾರಿಕೋದ್ಯಮಿ ಹಾಗೂ ಬಂಡವಾಳ ಹೂಡಿಕೆದಾರರ ಸಭೆಯಲ್ಲಿ ಮಾತನಾಡಿದರು.

ಕೈಗಾರಿಕೋದ್ಯಮಿಗಳಿಗೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಲು ತಿಳಿಸಿದ್ದು ಅದಕ್ಕೆ ಒಪ್ಪಿಕೊಂಡಿದ್ದಾರೆ.  ಅದರಲ್ಲೂ ನಾಲ್ಕನೇ ದರ್ಜೆ ನೌಕರರನ್ನು ಕಡ್ಡಾಯವಾಗಿ ಸ್ಥಳೀಯರಿಗೆ ನೀಡಬೇಕೆಂದು ತಿಳಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೃಷಿ ಅಭಿವೃದ್ಧಿಗೆ ನೀರಿನ ಕೊರತೆಯಿರುವುದರಿಂದ  ಜನರಿಗೆ ಉದ್ಯೋಗದ ಅಗತ್ಯವಿದೆ. ಇದಕ್ಕೆ ಪೂರಕವಾದ ವಿವಿಧ ಚಟುವಟಿಕೆಗಳು ಕೈಗೊಳ್ಳುವುದರಿಂದ ಜನರ ಆರ್ಥಿಕಮಟ್ಟ ಹೆಚ್ಚಾಗಲಿದೆ ಎಂದು ಹೇಳಿದರು.

ಕೈಗಾರಿಕೆಗಳಿಗಾಗಿ ವಿಶೇಷ ಮೂಲಸೌಲಭ್ಯ ಒದಗಿಸಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ.  ಅದಕ್ಕೆ ಕೆರೆಗಳ ಅಭಿವೃದ್ಧಿ, ನೀಲಗಿರಿ ಬೆಳೆ ನಿಲ್ಲಿಸಿ ಇತರೆ ಗಿಡಮರಗಳನ್ನು ಬೆಳೆಸುವುದು ಮುಖ್ಯವಾಗಿ ಆಗಬೇಕಾಗಿದೆ ಎಂದು ಹೇಳಿದರು.

ನರಸಾಪುರ ಕೈಗಾರಿಕಾ ವಲಯದಲ್ಲಿ ಹೆಚ್ಚಾಗಿ ಆಟೊಮೊಬೈಲ್ ಕೈಗಾರಿಕೆಗಳು ಸ್ಥಾಪನೆಯಾಗುತ್ತಿದ್ದು ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವಂತೆ ನೋಡಿಕೊಳ್ಳಬೇಕಾಗಿದೆ ಎಂದರು.ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬರುವ ಉದ್ದಿಮೆಗಳಿಗೆ ಭೂಮಿ ವಶಪಡಿಸಿಕೊಳ್ಳಲು ಜಿಲ್ಲಾಡಳಿತ ನೆರವಾಗಲಿದೆ ಎಂದು ಹೇಳಿದರು.

ಮೊದಲನೇ ಹಂತದಲ್ಲಿ ನರಸಾಪುರದಲ್ಲಿ 400 ಎಕರೆ, ಎರಡನೇ ಹಂತದಲ್ಲಿ 1500 ಎಕರೆ ಕೈಗಾರಿಕೆಗಳಿಗೆ ನೀಡಲಾಗಿದೆ ಎಂದು ಹೇಳಿದರಲ್ಲದೆ ಈಗಾಗಲೇ ಮುಳಬಾಗಲಿನಲ್ಲಿ  2000 ಎಕರೆ,  ವೇಮಗಲ್ ಸಮೀಪ 600 ಎಕರೆ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಈಗ ನರಸಾಪುರ ಕೈಗಾರಿಕಾ ವಲಯದಲ್ಲಿ ಕೈಗಾರಿಕೆಗಳ ಆರಂಭದಿಂದ 35000 ಜನರಿಗೆ ಉದ್ಯೋಗ ಕಲ್ಪಿಸಲಾಗುವುದು ಎಂದು ಹೇಳಿದರು.ಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ನಿವಾಸ್ ಸೆಪಟ್, ಕೈಗಾರಿಕಾ ಇಲಾಖೆ ಬೆಂಗಳೂರು ವಿಭಾಗದ ಜಂಟಿ ನಿರ್ದೇಶಕ ರಾಮಚಂದ್ರ, ಕೋಲಾರ ಜಂಟಿ ನಿರ್ದೇಶಕ ವೆಂಕಟೇಶ್,ಜಂಟಿ ನಿರ್ದೇಶಕ ಸುಜ್ಞಾನ ಮೂರ್ತಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT