ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಶಲ ಮೈಗೂಡಿಸಿಕೊಳ್ಳಲು ಪ್ರಶಿಕ್ಷಣಾರ್ಥಿಗಳಿಗೆ ಸಲಹೆ

Last Updated 13 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಮಡಿಕೇರಿ: ಪ್ರಶಿಕ್ಷಣಾರ್ಥಿಗಳು ಕೌಶಲಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಉತ್ತಮ ಗುಣಗಳನ್ನು ಬೆಳೆಸಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ್ ಸಲಹೆ ನೀಡಿದರು.

ನಗರದ ಸರಸ್ವತಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಶನಿವಾರ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರಥಮ ವರ್ಷದ ಡಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಕರಾಗಲು ಬಯಸುವವರು ಉತ್ತಮ ಅಭ್ಯಾಸ ನಡೆಸಬೇಕು.

ತರಬೇತಿಯು ಹೆಚ್ಚು ಪ್ರಾಯೋಗಿಕವಾಗಿರಬೇಕು. ಆಗ ಮಾತ್ರ ಉದ್ಯೋಗ ಪಡೆಯಲು ಸಾಧ್ಯ. ಇಲಾಖೆಯ ವತಿಯಿಂದ ನಡೆಸುವ ಉದ್ಯೋಗ ಮೇಳವನ್ನು ಸದುಪಯೋಗ ಪಡೆದುಕೊಳ್ಳಿ ಎಂದರು. ಕೊಡಗು ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಮಹದೇವಸ್ವಾಮಿ ಮಾತನಾಡಿ, ಇಂದು ಮೌಲ್ಯಯುತ ಶಿಕ್ಷಣ ದೊರೆಯುತ್ತಿಲ್ಲ. ಬಾವಿ ಶಿಕ್ಷಕರು ಮುಂದಿನ ಭವಿಷ್ಯದ ಪ್ರಜೆಗಳಿಗೆ ನೈತಿಕ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡವಂತಾಗಬೇಕು ಎಂದರು.

ಪ್ರಾಂಶುಪಾಲ ಕುಮಾರ್ ಮಾತನಾಡಿ, ಪ್ರಶಿಕ್ಷಣಾರ್ಥಿಗಳು ಉತ್ತಮ ಅಭ್ಯಾಸ ಮಾಡಿ ಜೀವನ ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ಕಾರ್ಯದರ್ಶಿ ಎಂ.ಸಂದೀಪ, ಶಿಕ್ಷಣ ಸಂಯೋಜಕ ಕೆ.ವಿ.ಸುರೇಶ್, ಜಿಲ್ಲಾ ಉಚಿತ ಕಾನೂನು ಸಲಹೆಗಾರ ಜಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT