ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್: ಕೋಲ್ಕತ್ತದ ಅಲ್ಪ ಮೊತ್ತ

Last Updated 19 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಹೈದರಾಬಾದ್:  ಕೋಲ್ಕತ್ತ ನೈಟ್ ರೈಡರ್ಸ್ ತಂಡದವರು ಸೋಮವಾರ ಇಲ್ಲಿ ಆರಂಭವಾದ ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಅರ್ಹತಾ ಸುತ್ತಿನ ಪಂದ್ಯದಲ್ಲಿ ಆಕ್ಲೆಂಡ್ ಎದುರು ಅಲ್ಪ ಮೊತ್ತ ದಾಖಲಿಸಿದ್ದಾರೆ.

ಉಪ್ಪಳದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತು.

ಈ ಗುರಿ ಬೆನ್ನಟ್ಟಿರುವ ಆಕ್ಲೆಂಡ್ ತಂಡ ಪತ್ರಿಕೆ ಮುದ್ರಣಕ್ಕೆ ಹೋಗುವ ವೇಳೆ 7 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 53 ರನ್ ಕಲೆಹಾಕಿತ್ತು.

ಇದಕ್ಕೂ ಮೊದಲು ನೈಟ್ ರೈಡರ್ಸ್ ತಂಡಕ್ಕೆ ಮಾನ್ವಿಂದರ್ ಬಿಸ್ಲಾ (45) ಹಾಗೂ ಜಾಕ್ ಕಾಲಿಸ್ (33) ಉತ್ತಮ ಆರಂಭ ನೀಡಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 57 ಎಸೆತಗಳಲ್ಲಿ 73 ರನ್ ಸೇರಿಸಿದರು. ಆದರೆ ಉಳಿದ     ಬ್ಯಾಟ್ಸ್‌ಮನ್‌ಗಳು ತಂಡದ ಮೊತ್ತ ಬೆಳೆಸುವಲ್ಲಿ ವಿಫಲರಾದರು.

ಸಂಕ್ಷಿಪ್ತ ಸ್ಕೋರ್: ಕೋಲ್ಕತ್ತ ನೈಟ್ ರೈಡರ್ಸ್: 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 121 (ಮಾನ್ವಿಂದರ್ ಬಿಸ್ಲಾ 45, ಜಾಕ್ ಕಾಲಿಸ್ 33, ಯೂಸುಫ್ ಪಠಾಣ್ 12; ಕೈಲ್ ಮಿಲ್ಸ್ 24ಕ್ಕೆ2); ಆಕ್ಲೆಂಡ್ ಎದುರಿನ ಪಂದ್ಯ.
(ವಿವರ ಅಪೂರ್ಣ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT