ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್: ದಕ್ಷಿಣ ಆಫ್ರಿಕಾಕ್ಕೆ ಜಯ

Last Updated 23 ಜುಲೈ 2012, 19:30 IST
ಅಕ್ಷರ ಗಾತ್ರ

ಲಂಡನ್ (ಎಎಫ್‌ಪಿ): ಡೇಲ್ ಸ್ಟೈನ್ (56ಕ್ಕೆ5) ಅವರ ಸಮರ್ಥ ಬೌಲಿಂಗ್ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಇಂಗ್ಲೆಂಡ್ ವಿರುದ್ಧದ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ 12 ರನ್ ಹಾಗೂ ಇನಿಂಗ್ಸ್ ಗೆಲುವು ಸಾಧಿಸಿತು.

ಪ್ರವಾಸಿ ತಂಡ ಮೊದಲ ಇನಿಂಗ್ಸ್‌ನಲ್ಲಿ ಗಳಿಸಿದ್ದ 637 ರನ್‌ಗಳು ಆತಿಥೇಯರಿಗೆ ಭಾರಿ ಸವಾಲು ಎನಿಸಿತ್ತು. ನಾಲ್ಕನೆ ದಿನವಾದ ಭಾನುವಾರದ ಆಟದ ಅಂತ್ಯಕ್ಕೆ ಇಂಗ್ಲೆಂಡ್ 38 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 102 ರನ್ ಗಳಿಸಿತ್ತು. ಕೊನೆಯ ದಿನವಾದ ಸೋಮವಾರ 138 ರನ್ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡಿತು. ಇದರಿಂದ ಮೂರು ಪಂದ್ಯಗಳ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 1-0ರಲ್ಲಿ ಮುನ್ನಡೆ ಸಾಧಿಸಿತು.

ಸಂಕ್ಷಿಪ್ತ ಸ್ಕೋರು: ಇಂಗ್ಲೆಂಡ್ ಮೊದಲ ಇನಿಂಗ್ಸ್ 125.5 ಓವರ್‌ಗಳಲ್ಲಿ 385 ಮತ್ತು ಎರಡನೆ ಇನಿಂಗ್ಸ್ 97 ಓವರ್‌ಗಳಲ್ಲಿ 240. (ಇಯಾನ್ ಬೆಲ್ 55, ರವಿ ಬೋಪಾರ 22, ಮ್ಯಾಟ್ ಪ್ರಿಯೊರ್ 40, ಟಿಮ್ ಬ್ರೆಸ್ನಿನ್ ಔಟಾಗದೆ 20; ಮಾರ್ನ್ ಮಾರ್ಕೆಲ್ 41ಕ್ಕೆ1, ಡೇಲ್ ಸ್ಟೈನ್ 56ಕ್ಕೆ5, ಇಮ್ರಾನ್ ತಾಹಿರ್ 63ಕ್ಕೆ3). ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್ 189 ಓವರ್‌ಗಳಲ್ಲಿ 2 ವಿಕೆಟ್‌ಗೆ 637.

ಫಲಿತಾಂಶ: ದಕ್ಷಿಣ ಆಫ್ರಿಕಾಕ್ಕೆ 12 ರನ್ ಹಾಗೂ ಇನಿಂಗ್ಸ್ ಜಯ. ಮೂರು ಪಂದ್ಯಗಳ ಸರಣಿಯಲ್ಲಿ 1-0ರಲ್ಲಿ ಮುನ್ನಡೆ. ಪಂದ್ಯ ಶ್ರೇಷ್ಠ: ಹಾಶಿಮ್ ಅಮ್ಲಾ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT