ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್: ಪಾಕ್ ತಂಡಕ್ಕೆ ಸುಲಭ ಗೆಲುವು

Last Updated 5 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬಲಾವಯೊ: ಐಜಾಜ್ ಚೀಮಾ (24ಕ್ಕೆ4) ಹಾಗೂ ಮೊಹಮ್ಮದ್ ಹಫೀಜ್ (31ಕ್ಕೆ4) ಅವರ ಪರಿಣಾಮಕಾರಿ ಬೌಲಿಂಗ್ ನೆರವಿನಿಂದ ಪಾಕಿಸ್ತಾನ ತಂಡದವರು ಇಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಏಕೈಕ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಏಳು ವಿಕೆಟ್‌ಗಳ ಗೆಲುವು ಸಾಧಿಸಿದ್ದಾರೆ.

ಕ್ವೀನ್ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಂಗಣದಲ್ಲಿ ಈ ಪಂದ್ಯದ ಐದನೇ ದಿನವಾದ ಸೋಮವಾರ ಜಿಂಬಾಬ್ವೆ ನೀಡಿದ 88 ರನ್‌ಗಳ ಗುರಿಯನ್ನು ಪಾಕಿಸ್ತಾನ 21.4 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ತಲುಪಿತು.

ಜಿಂಬಾಬ್ವೆ ತನ್ನ ಎರಡನೇ ಇನಿಂಗ್ಸ್ ನಲ್ಲಿ 56.3 ಓವರ್‌ಗಳಲ್ಲಿ ಕೇವಲ 141 ರನ್‌ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡಿತ್ತು.

ಸಂಕ್ಷಿಪ್ತ ಸ್ಕೋರ್: ಜಿಂಬಾಬ್ವೆ: ಮೊದಲ ಇನಿಂಗ್ಸ್: 150.4 ಓವರ್‌ಗಳಲ್ಲಿ 412 ಹಾಗೂ 56.3 ಓವರ್‌ಗಳಲ್ಲಿ 141 (ತಟೈಂಡ ಟೈಬು 58, ಕೈಲ್ ಜಾರ್ವಿಸ್ ಔಟಾಗದೆ 25; ಐಜಾಜ್ ಚೀಮಾ 24ಕ್ಕೆ4, ಮೊಹಮ್ಮದ್ ಹಫೀಜ್ 31ಕ್ಕೆ4); ಪಾಕಿಸ್ತಾನ: ಮೊದಲ ಇನಿಂಗ್ಸ್: 156.1 ಓವರ್‌ಗಳಲ್ಲಿ 466 ಹಾಗೂ 21.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 88 (ಮೊಹಮ್ಮದ್ ಹಫೀಜ್ 38, ಅಜರ್ ಅಲಿ 22): ಫಲಿತಾಂಶ: ಪಾಕಿಸ್ತಾನಕ್ಕೆ ಏಳು ವಿಕೆಟ್ ಗೆಲುವು ಹಾಗೂ 1-0ರಲ್ಲಿ ಸರಣಿ ಜಯ. ಪಂದ್ಯ ಶ್ರೇಷ್ಠ: ಮೊಹಮ್ಮದ್ ಹಫೀಜ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT