ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್ ಸರಣಿ: ಸ್ಥಳ ಅದಲು ಬದಲು

Last Updated 18 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮುಂದಿನ ವರ್ಷದ ಜನವರಿಯಲ್ಲಿ ನಡೆಯಲಿರುವ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಣ ಏಕದಿನ ಕ್ರಿಕೆಟ್ ಸರಣಿಯ ನಾಲ್ಕು ಹಾಗೂ ಐದನೇ ಪಂದ್ಯಗಳ ಸ್ಥಳಗಳನ್ನು ಬಿಸಿಸಿಐ ಅದಲು ಬದಲು ಮಾಡಿದೆ.

ಹೊಸ ವೇಳಾಪಟ್ಟಿಯ ಪ್ರಕಾರ ನಾಲ್ಕನೇ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಜನವರಿ 23ರಂದು ಈ ಪಂದ್ಯ ಜರುಗಲಿದೆ. ಧರ್ಮಶಾಲಾದಲ್ಲಿ ಜನವರಿ 27ರಂದು ಐದನೇ ಹಾಗೂ ಕೊನೆಯ ಏಕದಿನ ಪಂದ್ಯ ನಡೆಯಲಿದೆ. ಧರ್ಮಶಾಲಾದಲ್ಲಿ ಆಯೋಜನೆಯಾಗಿರುವ ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯ ಇದಾಗಿದೆ.  

ಮೊದಲು ನಿಗದಿಯಾಗಿದ್ದ ಪ್ರಕಾರ ನಾಲ್ಕನೇ ಪಂದ್ಯ ಧರ್ಮಶಾಲಾದಲ್ಲಿ ಹಾಗೂ ಐದನೇ ಪಂದ್ಯ ಮೊಹಾಲಿಯಲ್ಲಿ ನಡೆಯಬೇಕಿತ್ತು. ಈ ಸ್ಥಳಗಳನ್ನು ಈಗ ಅದಲು ಬದಲು ಮಾಡಲಾಗಿದೆ.

ಅಕ್ಟೋಬರ್‌ನಲ್ಲಿ ಭಾರತ ಪ್ರವಾಸ ಆರಂಭಿಸಲಿರುವ ಇಂಗ್ಲೆಂಡ್ ತಂಡ 5 ಟೆಸ್ಟ್, ಎರಡು ಟ್ವೆಂಟಿ-20 ಪಂದ್ಯ ಹಾಗೂ ಏಕದಿನ ಸರಣಿ ಆಡಲಿದೆ. ಅಹಮದಾಬಾದ್‌ನಲ್ಲಿ ನ. 15ರಂದು ಮೊದಲ ಟೆಸ್ಟ್ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT