ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡಾಕೂಟ: ಗುರುತಿನಚೀಟಿ ಪಡೆಯಲು ಸೂಚನೆ

Last Updated 21 ಸೆಪ್ಟೆಂಬರ್ 2013, 5:58 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿಜೇತರಾದವರು ಮೈಸೂರು ಹಾಗೂ ಮಂಡ್ಯದಲ್ಲಿ ನಡೆಯಲಿರುವ ವಿಭಾಗಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೂಚಿಸಿದೆ.

ಮಂಡ್ಯದಲ್ಲಿ ಸೆ. 26ರಿಂದ 28ರವರೆಗೆ ಬ್ಯಾಸ್ಕೆಟ್‌ಬಾಲ್, ಫುಟ್ ಬಾಲ್, ಹ್ಯಾಂಡ್‌ಬಾಲ್, ಷಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನಿಸ್, ಕೊಕ್ಕೊ, ಕಬಡ್ಡಿ, ಥ್ರೋಬಾಲ್ ಹಾಗೂ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆ  ನಡೆಯಲಿವೆ. ಈ ಸ್ಪರ್ಧೆಗಳಿಗೆ ಸೆ. 26ರಂದು ಮಧ್ಯಾಹ್ನ 2 ಗಂಟೆಯೊಳಗೆ ಮಂಡ್ಯ ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು. ಸೆ. 29 ರಿಂದ ಅ. 1ರವರೆಗೆ ಮೈಸೂರಿನಲ್ಲಿ ಅಥ್ಲೆಟಿಕ್‌ ಮತ್ತು ವಾಲಿಬಾಲ್ ಸ್ಪರ್ಧೆ ನಡೆಯಲಿದೆ. ಜಿಲ್ಲೆಯ ಕ್ರೀಡಾಪಟುಗಳು 29ರಂದು ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ಸಂಜೆ 4 ರಿಂದ 7 ಗಂಟೆಯೊಳಗೆ ವರದಿ ಮಾಡಿಕೊಳ್ಳಬೇಕಿದೆ.

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ವಿಭಾಗಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಈ ಕ್ರೀಡಾಪಟುಗಳು ತಮ್ಮ ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರದೊಂದಿಗೆ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಹಾಜರಾಗಿ ಗುರುತಿನಚೀಟಿ ಪಡೆದುಕೊಳ್ಳಬೇಕು. ಜತೆಗೆ, ಕ್ರೀಡಾ ಸಮವಸ್ತ್ರ ಸಿದ್ಧಪಡಿಸಲು ಅಳತೆ ನೀಡಬೇಕು.

ಹೆಚ್ಚಿನ ಮಾಹಿತಿ ದೂರವಾಣಿ ಸಂಖ್ಯೆ 08226- 224932 ಮೊಬೈಲ್ 94811 85218, 99456 15695 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT