ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡಾಮನೋಭಾವನೆ ಬೆಳೆಸಿಕೊಳ್ಳಿ : ಧರ್ಮಪ್ಪ

Last Updated 13 ಸೆಪ್ಟೆಂಬರ್ 2011, 6:20 IST
ಅಕ್ಷರ ಗಾತ್ರ

ಸೋಮವಾರಪೇಟೆ: ವಿದ್ಯಾರ್ಥಿಗಳು ಸೋಲು ಗೆಲುವಿನ ಕುರಿತು ಚಿಂತಿಸದೆ ಕ್ರೀಡಾ ಮನೋಭಾವದಿಂದ ಪಂದ್ಯಾಟ ದಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಡಿ.ಬಿ.ಧರ್ಮಪ್ಪ ಅಭಿಪ್ರಾಯಪಟ್ಟರು.

ಸಮೀಪದ ಗೌಡಳ್ಳಿಯಲ್ಲಿ ಸೋಮ ವಾರಪೇಟೆ ತಾಲ್ಲೂಕು ಮಟ್ಟದ ಅಂತರ ಪ್ರೌಢಶಾಲೆಗಳ ಮತ್ತು ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಸೋಮ ವಾರ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಮಾನಸಿಕ ಮತ್ತು ದೈಹಿಕ ವಿಕಸನಕ್ಕೆ ಕ್ರೀಡಾಕೂಟಗಳು ಸಹಕಾರಿ ಯಾಗಿವೆ. ಪ್ರತಿಭೆಯೊಂದಿಗೆ ಅದೃಷ್ಟವೂ ಇದ್ದರೆ ಮಾತ್ರ ಗೆಲುವು ಸುಲಭವಾಗು ತ್ತದೆ. ಸತತ ಪ್ರಯತ್ನ ಮತ್ತು ಏಕಾಗ್ರತೆಯಿಂದ ಗುರಿ ಮುಟ್ಟಲು ಸಾಧ್ಯವಿದೆ ಎಂದರು.

ಕ್ರೀಡಾಜ್ಯೋತಿಯನ್ನು ತಾಲ್ಲೂಕು ಪಂಚಾಯಿತಿ ಸದಸ್ಯ ಎಚ್.ಆರ್.ಸುರೇಶ್ ಸ್ವೀಕರಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಎಸ್.ಗೀತಾ ಪಂದ್ಯಾಟಗಳನ್ನು ಉದ್ಘಾಟಿಸಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವಿ.ಕೆ. ಲೋಕೇಶ್ ಕ್ರೀಡಾಕೂಟದ ಧ್ವಜಾ ರೋಹಣ ನೆರವೇರಿಸಿದರು. ಶಾಲಾ ಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ಬಿ.ಭರತ್‌ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಗೌಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಪಿ.ಮೊಗಪ್ಪ, ಸದಸ್ಯರಾದ ಜಿ.ಎಸ್.ನಾಗರಾಜು, ಸಿ.ಎ.ರೇಖಾ, ಆರ್.ಶಶಿಕಲಾ, ಜಿ.ಎಚ್.ತೀರ್ಥ, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಎಂ.ಗೋಪಾಲಕೃಷ್ಣ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಎಂ. ಕಾವೇರಮ್ಮ, ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT