ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡೆಗಳಿಗೆ ಒತ್ತು ನೀಡಲು ಸಲಹೆ

Last Updated 1 ಅಕ್ಟೋಬರ್ 2012, 5:00 IST
ಅಕ್ಷರ ಗಾತ್ರ

ರಾಮನಗರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೂ ಹೆಚ್ಚಿನ ಒತ್ತನ್ನು ನೀಡಬೇಕು ಎಂದು ರಾಮನಗರ ಚನ್ನಪಟ್ಟಣ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಶೇಷಾದ್ರಿ ತಿಳಿಸಿದರು.

ನಗರದ ಎಂ.ಎಚ್. ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ರೋಟರಿ ಸಂಸ್ಥೆ ವತಿಯಿಂದ ಭಾನುವಾರ ನಡೆದ ಯುವಜನ ಚಟುವಟಿಕೆಗಳ ಮಾಸಾಚರಣೆಯ ಮುಕ್ತಾಯ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಶಕ್ತಿ ವೃದ್ಧಿಸುತ್ತದೆ. ಇಂದು ಯುವಕರು ಕಂಪ್ಯೂಟರ್ ಆಟಗಳ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಇದರಿಂದ ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.

ಯುವಜನ ಸೇವಾ ನಿರ್ದೇಶಕ ಡಿ.ಪಿ. ಶಂಕರಲಿಂಗೇಗೌಡ ಯುವಜನ ಮಾಸಾಚರಣೆ-2012ರ ವರದಿಯನ್ನು ಓದಿದರು. ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ರೋಟರಿ ಸಂಸ್ಥೆಯ ಅಧ್ಯಕ್ಷ ಆರ್.ವಿ. ಸುರೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಂ.ಎಚ್.ಚಂದ್ರಶೇಖರ್, ಆರ್.ಕುಮಾರಸ್ವಾಮಿ, ಡಿ. ಪುಟ್ಟಸ್ವಾಮಯ್ಯ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT