ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡೆಯಿಂದ ಲಾಭ ಹೆಚ್ಚು

Last Updated 23 ಸೆಪ್ಟೆಂಬರ್ 2011, 19:35 IST
ಅಕ್ಷರ ಗಾತ್ರ

ಬೆಂಗಳೂರು: ಯುವಜನ ಸೇವಾ ಮತ್ತು ಕ್ರೀಡಾ ನಿರ್ದೇಶನಾಲಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿಯ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ಗ್ರಾಮಾಂತರ ವಿಭಾಗದ ದಸರಾ ಕ್ರೀಡಾಕೂಟಕ್ಕೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ನಾರಾಯಣಸ್ವಾಮಿ ಈ ಸಂದರ್ಭದಲ್ಲಿ ಮಾತನಾಡಿ `ಈ ಸ್ಪರ್ಧೆಗಳಿಗೆ ವಯಸ್ಸಿನ ಮಿತಿಯಿಲ್ಲ. ದಸರಾ ಕ್ರೀಡಾಕೂಟದಲ್ಲಿ ಪಡೆಯುವ ಪ್ರಮಾಣಪತ್ರವು ಶೈಕ್ಷಣಿಕ ಕೋರ್ಸ್‌ಗಳಲ್ಲಿ ಕ್ರೀಡಾ ಕೋಟಾದಡಿ ಪ್ರವೇಶಾವಕಾಶ ಪಡೆಯಲು ಸಹಕಾರಿಯಾಗಲಿದೆ~ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಟ್ಟಸ್ವಾಮಿ,   ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷೆ ಶಾಂತಮ್ಮ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಐ.ಆರ್. ಪೆರುಮಾಳ್ ಇತರರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT