ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ

Last Updated 3 ಡಿಸೆಂಬರ್ 2013, 7:34 IST
ಅಕ್ಷರ ಗಾತ್ರ

ಮಡಿಕೇರಿ: ನಗರದ ಜೂನಿಯರ್‌ ಕಾಲೇಜಿನ ಪ್ರಾಥಮಿಕ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಮಡಿಕೇರಿ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.

ಇದರಲ್ಲಿ ಮಡಿಕೇರಿ ಕ್ಲಸ್ಟರ್‌ಗೆ ಸೇರುವ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸುಮಾರು 36 ಶಾಲೆಗಳ ನೂರಾರು ವಿದ್ಯಾರ್ಥಿಗಳು ವಿವಿಧ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

1 ರಿಂದ 7ನೇ ತರಗತಿಯ ವರೆಗೆ ನಡೆದ ಸ್ಪರ್ಧೆಯ ವೈಯಕ್ತಿಕ ವಿಭಾಗದಲ್ಲಿ ಕಂಠಪಾಠ, ಧಾರ್ಮಿಕ ಪಠಣ, ಛದ್ಮವೇಷ, ಅಭಿನಯ ಗೀತೆ, ಲಘು ಸಂಗೀತ, ಮಾದರಿ ನಿರ್ಮಾಣ, ಚಿತ್ರಕಲೆ ಸೇರಿದಂತೆ 18ಕ್ಕೂ ಹೆಚ್ಚು ಸ್ಪರ್ಧೆ ನಡೆದರೆ, ಸಾಮೂಹಿಕ ವಿಭಾಗದಲ್ಲಿ ಜನಪದ ಗೀತೆ, ಭಾವಗೀತೆ, ಕೋಲಾಟ ಸೇರಿದಂತೆ ಮತ್ತಿತರ ಸ್ಪರ್ಧೆಗಳು ನಡೆದವು.

ಮಡಿಕೇರಿ ಕ್ಲಸ್ಟರ್‌ ಅಧಿಕಾರಿ ಜಗನ್ನಾಥ್‌ ಮಾತನಾಡಿ, ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದಲೇ ಈ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ ಎಂದು ಹೇಳಿದರು.

ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಯ ಕಲಿಕಾ ಸಮಾರ್ಥ್ಯ ಮತ್ತಷ್ಟು ವೃದ್ಧಿಯಾಗುತ್ತದೆ ಎಂಬ ಪರಿಕಲ್ಪನೆಯಲ್ಲಿ ಹಲವು ಮಟ್ಟದಲ್ಲಿ ಈ ಸ್ಪರ್ಧಾ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬರಲಾಗುತ್ತಿದೆ ಎಂದು ಅವರು ತಿಳಿಸಿದರು.

ಕ್ಲಸ್ಟರ್‌ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡುವ ಜೊತೆಗೆ ತಾಲ್ಲೂಕು ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು. ಡಿ. 3ರಂದು ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ ಕಾರರ್ಯಕ್ರಮ ನಡೆಯಲಿದೆ ಎಂದರು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT